K S Eshwarappa “ಸಿದ್ದರಾಮಯ್ಯ”ರನ್ನ “ತೊಟ್ಟಿಯಲ್ಲಿರುವ ಕಸ”ಕ್ಕೆ ಹೋಲಿಸಿದ ಈಶ್ವರಪ್ಪ
ಶಿವಮೊಗ್ಗ : ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ತೊಟ್ಟಿಯಲ್ಲಿರುವ ಕಸಕ್ಕೆ ಹೋಲಿಕೆ ಮಾಡಿ ವಾಗ್ದಾಳಿ ನಡೆಸಿದ್ದಾರೆ.
ಸಚಿವ ಸ್ಥಾನಕ್ಕೆ ಕೆ.ಎಸ್.ಈಶ್ವರಪ್ಪ ರಾಜೀನಾಮೆ ನೀಡಬೇಕು ಎಂಬ ಸಿದ್ದರಾಮಯ್ಯ ಹೇಳಿಕೆಗೆ ಶಿವಮೊಗ್ಗದಲ್ಲಿ ಪ್ರತಿಕ್ರಿಯೆ ನೀಡಿದ ಕೆ.ಎಸ್.ಈಶ್ವರಪ್ಪ, ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯ ಅವರು ಲೆಕ್ಕದಲ್ಲೂ ಇಲ್ಲ, ಬುಕ್ ನಲ್ಲೂ ಇಲ್ಲ.
ತೊಟ್ಟಿಯಲ್ಲಿರುವ ಕಸದಂತಾಗಿದೆ ಸಿದ್ದರಾಮಯ್ಯ ಅವರ ಪರಿಸ್ಥಿತಿ. ಹಾಗಾಗಿ ಮೊದಲು ಅವರು ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ತಿರುಗೇಟು ನೀಡಿದ್ದಾರೆ.
ಇನ್ನ ಸಿದ್ದರಾಮಯ್ಯರಿಗೆ ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡ ಮೇಲೆ ಹುಚ್ಚು ಹಿಡಿದಿದೆ.
ಕರ್ನಾಟಕದಲ್ಲಿ ಇಷ್ಟೊಂದು ಅಭಿವೃದ್ಧಿ ಆಗುತ್ತಿರುವುದನ್ನು ಸಹಿಸಿಕೊಳ್ಳಲು ಆಗುತ್ತಿಲ್ಲ. ಇದರಿಂದ ಸಿದ್ದರಾಮಯ್ಯ ಅವರಿಗೆ ತಲೆಕೆಟ್ಟು ಹೋಗಿದೆ ಎಂದು ವಾಗ್ದಾಳಿ ನಡೆಸಿದರು.
