ಗಮನಿಸಿ : ಏಪ್ರಿಲ್ 25ಕ್ಕೆ ಕೆ-ಸೆಟ್ ಪರೀಕ್ಷೆ K-set exam
ಮೈಸೂರು : ಕಾರಣಾಂತರಗಳಿಂದ ಮುಂದೂಡಲಾಗಿದ್ದ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್ ) ಯನ್ನ ಏಪ್ರಿಲ್ 25 ರಂದು ನಡೆಸಲಾಗುವುದು ಎಂದು ಮೈಸೂರು ವಿವಿ ತಿಳಿಸಿದೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ಮೈಸೂರು ವಿಶ್ವವಿದ್ಯಾಲಯದ ಸಂಯೋಜನಾಧಿಕಾರಿ, ಮೈಸೂರು ವಿಶ್ವವಿದ್ಯಾಲಯವು ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ(ಕೆಎಸ್ಇಟಿ)ಯನ್ನು ದಿನಾಂಕ 11-04-2021ರಂದು ನಡೆಸಲು ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿತ್ತು.
ಆದ್ರೆ ಕಾರಣಾಂತರಗಳಿಂದ ಪರೀಕ್ಷೆಯನ್ನು ಮುಂದೂಡಲಾಗಿತ್ತು. ಆದ್ದರಿಂದ ಸದರಿ ಕೆ ಸೆಟ್ 2021 ಪರೀಕ್ಷೆಯನ್ನು 25-04-2021(ಭಾನುವಾರ)ರಂದು ನಡೆಸಲು ತೀರ್ಮಾನಿಸಲಾಗಿರುತ್ತದೆ ಎಂಬುದಾಗಿ ತಿಳಿಸಿದ್ದಾರೆ.