ಜುಲೈ 25ರಂದು ಕೆ-ಸೆಟ್ ಪರೀಕ್ಷೆ : ಅಧಿಕೃತ ಪ್ರಕಟಣೆ K-Set
ಮೈಸೂರು : ಕೊರೊನಾ ಕಾರಣದಿಂದಾಗಿ ಮುಂದೂಡಲಾಗಿದ್ದ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ(ಕೆ-ಸೆಟ್)ಗೆ ದಿನಾಂಕ ನಿಗದಿ ಪಡಿಸಲಾಗಿದೆ. ದಿನಾಂಕ 25-07-2021ರಂದು ಕೆ-ಸೆಟ್ ಪರೀಕ್ಷೆ ನಡೆಯಲಿದೆ
ಈ ಕುರಿತಂತೆ ಮೈಸೂರು ವಿಶ್ವವಿದ್ಯಾಲಯದ ಕೆಸೆಟ್ ಕೇಂದ್ರದ ಸಂಯೋಜನಾಧಿಕಾರಿಗಳು ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.
ಮೈಸೂರು ವಿಶ್ವವಿದ್ಯಾಲಯವು ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ ದಿನಾಂಕ 11-04-2021ರಂದು ನಡೆಸಬೇಕಿತ್ತು.
ಆದ್ರೆ ಕೆಲ ಕಾರಣಾಂತರಗಳಿಂದ ಪರೀಕ್ಷೆಯನ್ನು ಮುಂದೂಡಲಾಗಿತ್ತು. ಆದ್ದರಿಂದ ಸದರಿ ಕೆಸೆಟ್ 2021ರ ಪರೀಕ್ಷೆಯನ್ನು 25-07-2021ರ ಭಾನುವಾರದಂದು ನಡೆಸಲು ತೀರ್ಮಾನಿಸಲಾಗಿರುತ್ತದೆ.
ಎಲ್ಲಾ ನೋಂದಾಯಿತ ಅಭ್ಯರ್ಥಿಗಳು ಕೆಸೆಟ್ 2021ರ ಪರೀಕ್ಷೆಗೆ ಸಂಬಂಧಿಸಿದಂತೆ ಕೆಸೆಟ್ ವೆಬ್ ಸೈಟ್ http://kset.uni-mysore.ac.in/ ನಲ್ಲಿ ಆಗಿಂದಾಗ್ಗೆ ಹೊರಡಿಸುವ ವಿಷಯಗಳನ್ನು ನೋಡಬಹುದಾಗಿ ಎಂದು ತಿಳಿಸಿದೆ.









