ಇಂದು ನಡೆಯಬೇಕಿದ್ದ ಕೆ-ಸೆಟ್ ಪರೀಕ್ಷೆ ಮುಂದೂಡಿಕೆ
ಬೆಂಗಳೂರು : ಮೈಸೂರು ವಿಶ್ವವಿದ್ಯಾಲಯದ ವತಿಯಿಂದ ಇಂದು ನಡೆಸಬೇಕಿದ್ದ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ(ಕೆ -ಸೆಟ್)ಯನ್ನು ಮುಂದೂಡಿಕೆ ಮಾಡಲಾಗಿದೆ.
ಕುರಿತು ಮೈಸೂರು ವಿವಿ ಕೆ ಸೆಟ್ ಸಂಯೋಜಕ ಪೆÇ್ರ.ಹೆಚ್.ರಾಜಶೇಖರ್ ಪ್ರಕಟನೆ ಹೊರಡಿಸಿದ್ದು, ಯುಜಿಸಿ ಮಾರ್ಗಸೂಚಿಯಂತೆ ಏಪ್ರಿಲ್ 11 ರಂದು ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ(ಕೆ-ಸೆಟ್) ನಡೆಸಲು ಪೂರ್ವಸಿದ್ಧತೆಗಳನ್ನು ಮಾಡಿಕೊಳ್ಳಲಾಗಿತ್ತು.
ಆದರೆ, ಕಾರಣಾಂತರಗಳಿಂದ ಕೆಸೆಟ್ ಪರೀಕ್ಷೆಯನ್ನು ಮುಂದೂಡಲು ನಿರ್ಧರಿಲಾಗಿದೆ. ಮುಂದಿನ ಕೆ-ಸೆಟ್ ಪರೀಕ್ಷಾ ದಿನಾಂಕವನ್ನ ಶೀಘ್ರದಲ್ಲಿ ಕೆಸೆಟ್ ವೆಬ್ ಸೈಟ್ ನಲ್ಲಿ ಪ್ರಚುರಪಡಿಸಲಾಗುವುದು.
ಎಲ್ಲಾ ನೊಂದಾಯಿತ ಅಭ್ಯರ್ಥಿಗಳು ಕೆ-ಸೆಟ್ 2021 ಪರೀಕ್ಷೆಗೆ ಸಂಬಂಧಿಸಿದಂತೆ ಕೆಸೆಟ್ ವೆಬ್ ಸೈಟ್ (http://kset.uni-mysore.ac.in) ನಲ್ಲಿ ಆಗಿಂದಾಗ್ಗೆ ಹೊರಡಿಸುವ ವಿಷಯಗಳನ್ನು ವೀಕ್ಷಿಸುವಂತೆ ತಿಳಿಸಲಾಗಿದೆ.









