ಇಂದ್ರಧನುಷ್ 3.0ಗೆ ಚಾಲನೆ, 13 ಕಡೆಗಳಲ್ಲಿ ಲಸಿಕೆ: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್
ಫೆಬ್ರವರಿ 22 ರಿಂದ ಮಾರ್ಚ್ 22 ರವರೆಗೆ ಲಸಿಕೆ ಅಭಿಯಾನ
ಬೆಂಗಳೂರು : ಮಕ್ಕಳು ಹಾಗೂ ಗರ್ಭಿಣಿಯರಿಗೆ ಏಳು ರೋಗಗಳು ಬಾರದಂತೆ ತಡೆಯಲು ಮಾರ್ಚ್ 22 ರವರೆಗೆ ಇಂದ್ರಧನುಷ್ ಲಸಿಕೆ ಅಭಿಯಾನ ನಡೆಸಲಾಗುತ್ತಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಹಾಗೂ ಗರ್ಭಿಣಿಯರಿಗೆ 13 ಜಿಲ್ಲೆಗಳಲ್ಲಿ ಲಸಿಕೆ ನೀಡಲಾಗುವುದು. ಕೇಂದ್ರ ಸರ್ಕಾರ ಇಂದ್ರಧನುಷ್ 3.0 ಅಭಿಯಾನ ಅನುಷ್ಠಾನಗೊಳಿಸಿದ್ದು, ಫೆಬ್ರವರಿ 22 ರಿಂದ ಮಾರ್ಚ್ 22 ರವರೆಗೆ ಈ ಅಭಿಯಾನ ನಡೆಸಲಾಗುವುದು. ಈವರೆಗೆ ತಲುಪಲಾಗದ ಪ್ರದೇಶಗಳನ್ನು ಗುರಿಯಾಗಿಟ್ಟುಕೊಂಡು ಈ ಲಸಿಕೆ ನೀಡಲಾಗುತ್ತಿದೆ ಎಂದು ತಿಳಿಸಿದರು.
ಮಾಸ್ ಲುಕ್, ಖರಾಬ್ ಡೈಲಾಗ್ಸ್, ಸಖತ್ ಸಾಂಗ್ಸ್, ಸೆಂಟಿಮೆಂಟ್.. ವಾವ್ ಏನ್ ಸಿನಿಮಾ ಗುರು ಈ ‘ಪೊಗರು’..!
ಬಿಜೆಪಿ ಸರ್ಕಾರ 2014 ರ ಡಿಸೆಂಬರ್ 25 ರಂದು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಜನ್ಮದಿಂದ ಈ ಲಸಿಕೆ ಅಭಿಯಾನ ಆರಂಭಿಸಿತ್ತು. ನಂತರ 2017 ರ ಅಕ್ಟೋಬರ್ 8 ರಂದು ಇಂಟೆನ್ಸಿಫೈಡ್ ಮಿಷನ್ ಇಂದ್ರಧನುಷ್ ಗೆ ಚಾಲನೆ ನೀಡಲಾಗಿತ್ತು. ಈಗ ಮುಂದಿನ ಭಾಗವಾಗಿ 3.0 ಗೆ ಚಾಲನೆ ದೊರೆತಿದೆ. ಕಾಮನಬಿಲ್ಲಿನಲ್ಲಿ ಏಳು ಬಣ್ಣಗಳಿರುವಂತೆಯೇ, ಇಂದ್ರಧನುಷ್ ಏಳು ರೋಗಗಳು ಬಾರದಂತೆ ತಡೆಯುತ್ತದೆ ಎಂದರು.
ರಾಷ್ಟ್ರ ರಾಜಧಾನಿಯ ಸದ್ಯದ ಪರಿಸ್ಥಿತ ಆಘಾತಕಾರಿ – ಪ್ರತಿ 5 ಗಂಟೆಗೊಂದು ಅತ್ಯಾಚಾರ, 19 ಗಂಟೆಗೊಂದು ಕೊಲೆ..!
ಡಿಫ್ತೀರಿಯಾ, ವೂಫಿಂಗ್ ಕಾಫ್, ಟೆಟಾನಸ್, ಟ್ಯುಬರ್ ಕ್ಯುಲೋಸಿಸ್, ಪೋಲಿಯೋ, ಮಿಸಲ್ಸ್, ಹೆಪಟೈಟಸ್ ಗೆ ಬಿಗೆ ಇದರಲ್ಲಿ ಲಸಿಕೆ ನೀಡಲಾಗುವುದು. ಬೆಂಗಳೂರು, ಬಿಬಿಎಂಪಿ ವ್ಯಾಪ್ತಿ, ಬಳ್ಳಾರಿ, ಬಾಗಲಕೋಟೆ, ಬೆಳಗಾವಿ, ಬೀದರ್, ಚಿಕ್ಕಬಳ್ಳಾಪುರ, ದಾವಣಗೆರೆ, ಗದಗ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರದಲ್ಲಿ ಈ ಲಸಿಕೆ ನೀಡಲಾಗುವುದು ಎಂದರು.
ಬಿಜೆಪಿ ಅತ್ಯಾಚಾರ ಸಂತ್ರಸ್ತರನ್ನೇ ಹೊಣೆ ಮಾಡುತ್ತಿದೆ: ರಾಹುಲ್ ವಾಗ್ದಾಳಿ
ಈ ಜಿಲ್ಲೆಗಳಲ್ಲಿ ವಲಸಿಗರನ್ನು ಹೊಂದಿದ ಸ್ಲಂ, ಇಟ್ಟಿಗೆ ಸುಡುವ ಜಾಗ, ಅಲೆಮಾರಿಗಳು ವಾಸಿಸುವ ಸ್ಥಳ, ಕಟ್ಟಡ ನಿರ್ಮಾಣ ಸ್ಥಳ ಮೊದಲಾದ ಕಡೆಗಳಲ್ಲಿ ಮಕ್ಕಳಿಗೆ ಲಸಿಕೆ ನೀಡಲಾಗುವುದು ಎಂದರು.