ಹಾಸನ: ಜಿಲ್ಲೆಯಲ್ಲಿ (Hassan) ಮತ್ತೆ ಕಾಡಾನೆಗಳ ದಾಳಿ (Wild Elephant Attack) ನಡೆದಿದ್ದು, ಮಹಿಳೆಯೊಬ್ಬರು ಸಾವು- ಬದುಕಿನ ನಡುವೆ ಹೋರಾಡುತ್ತಿದ್ದಾರೆ.
ಬೇಲೂರು ತಾಲೂಕಿನ ಸಿಂಗ್ರವಳ್ಳಿ ಗ್ರಾಮದಲ್ಲಿ ಕಾಡಾನೆ ದಾಳಿಯಿಂದಾಗಿ 50 ವರ್ಷದ ಮೆನಕಾ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸದ್ಯ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಹಿಂದಿನ ವಾರವಷ್ಟೇ ಕಾರ್ಮಿಕ ವಸಂತ್ ಎಂಬುವವರು ಕಾಡಾನೆ ದಾಳಿಯಿಂದಾಗಿ ಸಾವನ್ನಪ್ಪಿದ್ದರು. ಅದು ಮಾಸುವ ಮುನ್ನವೇ ಮತ್ತೊಂದು ಘಟನೆ ನಡೆದಿರುವುದಕ್ಕೆ ಸಾರ್ವಜನಿಕರು ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಕಾಡಾನೆಗಳಿಂದ ಶಾಶ್ವತ ಮುಕ್ತಿ ಕೊಡಿಸಬೇಕೆಂದು ಮನವಿ ಮಾಡುತ್ತಿದ್ದಾರೆ.