ಕಾಡಸಿದ್ದೇಶ್ವರ ಸ್ವಾಮೀಜಿ ಕಾರು ಅಪಘಾತ!
ಗುಳ್ಳೆದಗುಡ್ಡದ ಬಳಿ ನೀಲಗಿರಿ ಬಳಿ ಘಟನೆ
ಸ್ವಾಮೀಜಿ ಸೇರಿ ಮೂವರಿಗೆ ಸಣ್ಣಪುಟ್ಟ ಗಾಯ
ಬೆಳಗ್ಗೆ 7.30ರ ಸುಮಾರಿಗೆ ಸಂಭವಿಸಿದ ಅಪಘಾತ
ಖಾಸಗಿ ಆಸ್ಪತ್ರೆಯಲ್ಲಿ ಸ್ವಾಮೀಜಿಗೆ ಚಿಕಿತ್ಸೆ
ಬಾಗಲಕೋಟೆ : ಕಾಡಸಿದ್ದೇಶ್ವರ ಮರಡಿಮಠದ ಅಭಿನಯ ಕಾಡಸಿದ್ದೇಶ್ವರ ಸ್ವಾಮೀಜಿ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಸ್ವಾಮೀಜಿ ಸೇರಿದಂತೆ ಮೂವರಿಗೆ ಗಾಯಗಳಾಗಿವೆ.
ಗುಳ್ಳೇದಗುಡ್ಡ ತಾಲೂಕಿನ ತೋಗುಣಸಿ ತಾಂಡಾ ಬಳಿ ಈ ಅಪಘಾತ ಸಂಭವಿಸಿದೆ.
ಗದಗ ಜಿಲ್ಲೆಯ ಹಾಲಕೇರಿಯಿಂದ ಗುಳೇದಗುಡ್ಡ ಪಟ್ಟಣಕ್ಕೆ ಸ್ವಾಮೀಜಿ ಆಗಮಿಸುತ್ತಿದ್ದರು.
ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು ನೀಲಗಿರಿ ಮರಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ನುಜ್ಜುಗುಜ್ಜಾಗಿದೆ.

ಅಪಘಾತದಲ್ಲಿ ಸ್ವಾಮೀಜಿ ಸೇರಿ ಕಾರು ಚಾಲಕ ಮತ್ತಿಬ್ಬರಿಗೆ ಸಣ್ಣಪುಟ ಗಾಯಗಳಾಗಿವೆ.
ಈ ಘಟನೆಯ ಬಳಿಕ ಗಾಯಾಳುಗಳನ್ನು ಗುಳೇದಗುಡ್ಡ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಯಿತು.
ಅಲ್ಲಿ ಚಿಕಿತ್ಸೆ ಪಡೆದ ಸ್ವಾಮೀಜಿ ಬಳಿಕ ಮಠಕ್ಕೆ ತೆರಳಿದ್ದಾರೆ.
ಇನ್ನು ಸ್ವಾಮೀಜಿಗೆ ಅಪಘಾತವಾಗಿರುವ ಸುದ್ದಿ ತಿಳಿಯುತ್ತಿದ್ದಂತೆ ಅವರ ಅನುಯಾಯಿಗಳು ಆಸ್ಪತ್ರಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ರು.








