ಬೆಂಗಳೂರು: ಕಾಂಗ್ರೆಸ್ ನಾಯಕರು ಮಾತ್ರ ಸ್ವಾತಂತ್ರ್ಯ ಹೋರಾಟದಲ್ಲಿ ತ್ಯಾಗ, ಬಲಿದಾನ ಮಾಡಿದವರು. ಬಿಜೆಪಿಯವರೂ ದೇಶಕ್ಕಾಗಿ ತ್ಯಾಗ, ಬಲಿದಾನ ಮಾಡಿದವರಲ್ಲ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.
ಇಂದಿರಾ ಗಾಂಧಿ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶಕ್ಕಾಗಿ ಇಂದಿರಾ ಗಾಂಧಿ ಬಹಳ ದೃಢ ನಿರ್ಧಾರ ತೆಗೆದುಕೊಳ್ಳುತ್ತಿದ್ದರು. ಹೀಗಾಗಿಯೇ ಅವರನ್ನು ಉಕ್ಕಿನ ಮಹಿಳೆ ಎಂದು ಕರೆಯಲಾಗುತ್ತಿತ್ತು ಎಂದು ಹೇಳಿದ್ದಾರೆ.
ಅವರು ಹುಟ್ಟಿದ ಸ್ಥಳ ರಾಜಕೀಯ ಕೇಂದ್ರವಾಗಿತ್ತು. ಇಂದಿರಾ ಗಾಂಧಿ ಬಾಲ್ಯದಿಂದಲೇ ಜನಪರ ಧೋರಣೆ ಹೊಂದಿದ್ದವರು. ದೇಶಕ್ಕಾಗಿ ಬಹಳ ದೃಢವಾದ ನಿರ್ಧಾರ ತೆಗೆದುಕೊಳ್ಳುತ್ತಿದ್ದರು. ಬಿಜೆಪಿಯವರು ಒಬ್ಬರು ಸಹ ಮಾಡಿಲ್ಲ. ಸಮಾ ಸಮಾಜದ ನಿರ್ಮಾಣ ಮಾಡುವುದಕ್ಕೆ ಕಾಂಗ್ರೆಸ್ ಶ್ರಮಿಸುತ್ತಿದೆ. ಇಂದಿರಾಗಾಂಧಿ ಹಠಾವೋ ಎಂದು ವಿಪಕ್ಷಗಳ ನಾಯಕರು ಎನ್ನುತ್ತಿದ್ದರು. ಆದರೆ ಇಂದಿರಾಗಾಂಧಿ ಗಗರೀಬಿ ಹಠಾವೋ ಎನ್ನುತ್ತಿದ್ದರು ಎಂದು ಹೇಳಿದ್ದಾರೆ. ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನ ಪ್ರಮುಖ ನಾಯಕರು ಭಾಗಿಯಾಗಿದ್ದರು.