Kalaburagi | ಹಳ್ಳದಲ್ಲಿ ಕೊಚ್ಚಿ ಹೋದ ಯುವತಿ.. ಮುಂದುವರೆದ ಶೋಧ
ಕಲಬುರಗಿ : ಜಿಲ್ಲೆಯಲ್ಲಿ ಮಳೆರಾಯನ ಆರ್ಭಟ ಜೋರಾಗಿದೆ.
ಜಿಲ್ಲೆಯ ಲಾಡಮುಗಳಿ ಗ್ರಾಮದಲ್ಲಿ ತುಂಬಿ ಹರಿಯುತ್ತಿರುವ ಹಳ್ಳದಲ್ಲಿ ಯುವತಿ ಕೊಚ್ಚಿ ಹೋಗಿದ್ದು, ಶೋಧಕಾರ್ಯ ಮುಂದುವರೆದಿದೆ.
ದಾನೇಶ್ವರಿ ನೀರಿನಲ್ಲಿ ಕೊಚ್ಚಿ ಹೋದ ಯುವತಿಯಾಗಿದ್ದಾಳೆ.
ಜಿಲ್ಲೆಯಲ್ಲಿ ನಿರಂತರ ಮಳೆಯಿಂದಾಗಿ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ.

ಈ ನಡುವೆ ತಾಯಿ ಜೊತೆ ಯುವತಿ ಬಟ್ಟೆ ತೊಳೆಯಲು ಹೋಗಿದ್ದರು.
ಈ ವೇಳೆ ನೀರಿನ ರಭಸಕ್ಕೆ ದಾನೇಶ್ವರಿ ಕೊಚ್ಚಿ ಹೋಗಿದ್ದಾಳೆ.
ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದು, ತಡರಾತ್ರಿವರೆಗೂ ಹುಡುಕಾಟ ನಡೆಸಲಾಗಿತ್ತು.
ಕತ್ತಲಾಗಿದ್ದರಿಂದ ಶೋಧ ಕಾರ್ಯ ಸ್ಥಗಿತಗೊಳಿಸಲಾಗಿತ್ತು.
ಇಂದು ಬೆಳಗ್ಗೆಯಿಂದ ಮತ್ತೆ ಅಗ್ನಿಶಾಮಕ ಸಿಬ್ಬಂದಿಯಿಂದ ಶೋಧ ಕಾರ್ಯ ಮುಂದುವರೆದಿದೆ.
ಈ ಸಂಬಂಧ ನರೋಣಾ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.







