Kalaburagi | ಸಿಎಂಗೆ ಕಪ್ಪುಪಟ್ಟಿ ಪ್ರದರ್ಶಿಸಿದ ತಳವಾರ ಸಮುದಾಯ
ಕಲಬುರಗಿ : ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಇಂದು ಕಲಬುರಗಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಪೊಲೀಸ್ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ್ದಾರೆ.
ಇದಕ್ಕೂ ಮುನ್ನಾ ಸರ್ದಾರ್ ವಲ್ಲಭಬಾಯ್ ಪಟೇಲ್ ಪುತ್ಥಳಿಗೆ ನಮನ ಸಲ್ಲಿಸಿದರು.
ಈ ನಡುವೆ ಕಲಬುರಗಿ ನಗರದ ಸರ್ಧಾರ್ ವಲ್ಲಭಭಾಯ್ ಪಟೇಲ್ ವೃತ್ತದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ತಳವಾರ ಸಮುದಾಯದವರು ಕಪ್ಪು ಪಟ್ಟಿ ಪ್ರದರ್ಶಿಸಿದ್ದಾರೆ.
ತಳವಾರ ಸಮುದಾಯಕ್ಕೆ ಎಸ್ಟಿ ಪ್ರಮಾಣ ಪತ್ರ ನೀಡುವಂತೆ ಆಗ್ರಹಿಸಿ ಹೋರಾಟ ನಡೆಸಿದ್ದಾರೆ.
ಹೋರಾಟಕ್ಕೆ ಸರ್ಕಾರ ಸ್ಪಂದಿಸದ ಹಿನ್ನಲೆಯಲ್ಲಿ ಸಿಎಂಗೆ ಕಪ್ಪುಪಟ್ಟಿ ಪ್ರದರ್ಶನ ಮಾಡಲಾಗಿದೆ.
ಇತ್ತ ಪೊಲೀಸರು ಕಪ್ಪುಪಟ್ಟಿ ಪ್ರದರ್ಶಿಸಿದ 25 ಕ್ಕೂ ಅಧಿಕ ಜನರನ್ನು ವಶಕ್ಕೆ ಪಡೆದಿದ್ದಾರೆ. Kalaburagi black-flag-shown-to-cm-bommai saaksha tv