Kalaburagi | ನೆರೆ ಪೀಡಿತ ಪ್ರದೇಶಗಳಿಗೆ ಕೇಂದ್ರ ಅಧ್ಯಯನ ತಂಡ ಭೇಟಿ
ಕಲಬುರಗಿ : ಜಿಲ್ಲೆಯಲ್ಲಿ ಭಾರಿ ಮಳೆಗೆ ಅಪಾರ ಪ್ರಮಾಣದ ಬೆಳೆ ನಾಶವಾಗಿದೆ.
ಹೀಗಾಗಿ ಜಿಲ್ಲೆಯ ನೆರೆ ಪೀಡಿತ ಪ್ರದೇಶಗಳಿಗೆ ಇಂದು ಕೇಂದ್ರ ಅಧ್ಯಯನ ತಂಡ ಭೇಟಿ ನೀಡಿದೆ.
ಕೇಂದ್ರ ಕೃಷಿ ಹಾಗು ರೈತ ಕಲ್ಯಾಣ ಸಚಿವಾಲಯದ ನಿರ್ದೇಶಕ ಮನೋಹರನ್ ತಂಡ ಪ್ರವಾಸ ಕೈಗೊಂಡಿದ್ದು ಹೊನ್ನ ಕಿರಣಗಿ ಸೇರಿದಂತೆ ಹಲವು ಗ್ರಾಮಗಳಿಗೆ ತೆರಳಿ ವೀಕ್ಷಣೆ ನಡೆಸಿತು.

ಚಿತ್ತಾಪುರ ಜೇವರ್ಗಿ ಅಫಜಲಪುರ ಸೇರಿದಂತೆ ಹಲವು ತಾಲೂಕುಗಳ ಸಾವಿರಾರು ಎಕರೆ ಪ್ರದೇಶದ ಬೆಳೆ ಹಾನಿಯಾಗಿದೆ.
ಜುಲೈ ಅಗಸ್ಟ್ ತಿಂಗಳಲ್ಲಿ ಸುರಿದ ಮಳೆ ಅನಾಹುತ ಸೃಷ್ಟಿ ಮಾಡಿದೆ.
ಹೀಗಾಗಿ ಕೇಂದ್ರ ತಂಡ ಅಧ್ಯಯನ ನಡೆಸಿ ನಂತ್ರ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ.