Kalaburagi | ಭೀಮಾ ನದಿಗೆ ಅಪಾರ ಪ್ರಮಾಣದ ನೀರು – ಸೇತುವೆ ಜಲಾವೃತ
ಕಲಬುರಗಿ : ಮಹಾರಾಷ್ಟ್ರದಲ್ಲಿ ಭಾರಿ ಮಳೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ.
ಇದರಿಂದ ಅಲ್ಲಿನ ಜಲಾಶಯಗಳು ಸಂಪೂರ್ಣವಾಗಿ ಭರ್ತಿಯಾಗಿದ್ದು, ಭೀಮಾ ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ.
ಇದರಿಂದ ಕಲಬುರಗಿಯ ಸೊನ್ನ ಬ್ಯಾರೇಜ್ ಸಂಪೂರ್ಣವಾಗಿ ಭರ್ತಿಯಾಗಿದೆ.
ಇದರಿಂದ ಭೀಮಾ ನದಿಗೆ ನೀರು ಬಿಡುಗಡೆ ಮಾಡಲಾಗಿದೆ.
ಭೀಮಾನದಿಗೆ 97 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದ್ದು, ಅಫಜಲಪುರ ತಾಲೂಕಿನ ಘತ್ತರಗಿ ಸೇತುವೆ ಜಲಾವೃತಗೊಂಡಿದೆ.
ಸೇತುವೆ ಜಲಾವೃತ ಪರಿಣಾಮ ವಾಹನ ಸಂಚಾರ ಸ್ಥಗಿತಗೊಂಡಿದೆ.
ಇದರಿಂದ ಸೇತುವೆ ಬಳಿ ಜನ ತೆರಳದಂತೆ ಪೊಲೀಸರು ನಿಗಾ ವಹಿಸಿದ್ದಾರೆ.