ಕಲಬುರಗಿ : ಗ್ರಾಮ ಪಂಚಾಯತಿ ಕಚೇರಿಯಲ್ಲಿನ ಕಡತ ಕಳ್ಳತನ ಮಾಡಿರುವ ಘಟನೆ ಕಲಬುರಗಿಯ ಹಲಕರ್ಟಿ ಗ್ರಾಮ ಪಂಚಾಯತಿಯಲ್ಲಿ ನಡೆದಿದ್ದು , ಕಳ್ಳತನ ಮಾಡುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಗ್ರಾಮ ಪಂಚಾಯತಿ ಕರವಸೂಲಿಗಾರನ ಸಹೋದರ ಪಂಚಾಯಿತಿ ಕಚೇರಿಯ ಅಲ್ಮೆರಾ ತೆಗೆದು ಕಡತ ಕಳ್ಳತನ ಮಾಡಿದ್ದಾನೆ.. ಕಡತಗಳನ್ನು ಚೀಲದಲ್ಲಿ ತುಂಬಿಕೊಂಡು ಹೋಗುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಪಂಚಾಯತಿ ಕರವಸೂಲಿಗಾರ ಸಹೋದರನಿಂದ ಕಳ್ಳತನ ಮಾಡಿಸಿದ ಶಂಕೆ ವ್ಯಕ್ತವಾಗಿದೆ. ವಾಡಿ ಪೋಲಿಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.