Kalaburagi | ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ
ಕಲಬುರಗಿ : ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಕೊಲೆ ಮಾಡಿರುವ ಘಟನೆ ಕಲಬುರಗಿ ನಗರದ ಹಳೆ ಜೇವರ್ಗಿ ರಸ್ತೆಯಲ್ಲಿ ನಡೆದಿದೆ.
ಹೌಸಿಂಗ್ ಬೋರ್ಡ್ ಕಾಲನಿ ನಿವಾಸಿ ಜಮೀರ್ ಕೊಲೆಯಾದ ದುರ್ದೈವಿ.
![Kalaburagi](http://saakshatv.com/wp-content/uploads/2022/09/murder.jpg)
ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಕೊಲೆ ಮಾಡಲಾಗಿದೆ ಎಂದು ಶಂಕಿಸಲಾಗಿದೆ.
ಸ್ಥಳಕ್ಕೆ ಸ್ಟೇಷನ್ ಬಜಾರ್ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಸಂಬಂಧ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.