Kalaburagi | ಎರಡು ಬೈಕ್ ಮುಖಾಮುಖಿ ಡಿಕ್ಕಿ – ಮೂವರು ಸಾವು..
ಕಲಬುರಗಿ : ಎರಡು ಬೈಕ್ ಮುಖಾಮುಖಿ ಡಿಕ್ಕಿಯಾದ ಹಿನ್ನೆಲೆಯಲ್ಲಿ ಮೂವರು ಕೊನೆಯುಸಿರೆಳೆದಿದ್ದಾರೆ.
ಕಲಬುರಗಿ ಜಿಲ್ಲೆಯ ಹೂವಿನಹಳ್ಳಿ ಬಳಿ ಈ ಘಟನೆ ನಡೆದಿದೆ.
ಶ್ರೀಕಾಂತ್, ಜಗನ್ನಾಥ್, ಮಹೆಬೂಬ್ ಮೃತ ದುರ್ದೈವಿಗಳಾಗಿದ್ದಾರೆ.
ಘಟನೆಯಲ್ಲಿ ಇನ್ನೊರ್ವ ಸವಾರ ಅಮರ್ ಗಂಭೀರವಾಗಿ ಗಾಯಗೊಂಡಿದ್ದಾರೆ.
ಸ್ಥಳೀರು ಆತನನ್ನು ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ.
ಇನ್ನು ಈ ಸಂಬಂಧ ಸುಲೇಪೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.