Kalasa Banduri : ಕಳಸಾ ಬಂಡೂರಿ ನಾಲಾ ಯೋಜನೆಗೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್…
ಕೇಂದ್ರ ಸರ್ಕಾರ ಉತ್ತರ ಕರ್ನಾಟಕದ ಜನತೆಗೆ ಸಿಹಿ ಸುದ್ದಿ ನೀಡಿದೆ. ರಾಜ್ಯ ಸರ್ಕಾರ ಸಲ್ಲಿಸಿದ್ದ ಕಳಸಾ ಬಂಡೂರಿ ನಾಲಾ ವಿಸ್ತೃತ ಯೋಜನಾ ವರದಿಗೆ ಕೇಂದ್ರ ಜಲ ಆಯೋಗ ಅನುಮತಿ ನೀಡಿದೆ.
ಕಳಸಾ ಬಂಡೂರಿ ವಿಸ್ತೃತ ಯೋಜನೆ ರಾಜ್ಯ ಸರ್ಕಾರ ಕಳುಹಿಸಿದ್ದ ಡಿಪಿಆರ್ಗೆ ಜಲ ಆಯೋಗ ಅನುಮತಿ ನಿಡಿದ್ದಕ್ಕಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಧನ್ಯವಾದಗಳು ತಿಳಿಸಿದ್ದಾರೆ.
ಕಳಸಾ ಬಂಡೂರಿ ಯೋಜನೆಗೆ ಈ ಹಿಂದೆ ನಾವು ಕೂಡಾ ಹೋರಾಟ ಮಾಡಿದ್ವಿ. ಇದೀಗ ವಿಸ್ತೃತ ಯೋಜನಾ ವರದಿಗೆ ಸರ್ಕಾರ ಒಪ್ಪಿಗೆ ನೀಡಿದೆ ಎಂದಿರುವ ಜೋಶಿ, ಬೊಮ್ಮಾಯಿ ಸರ್ಕಾರವೂ ಅತ್ಯಂತ ಶ್ರಮ ಹಾಕಿದೆ. ನಾನು ಬೊಮ್ಮಾಯಿ, ಗೋವಿಂದ್ ಕಾರಜೋಳ ಅವರಿಗೂ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.
ಇನ್ನು ಸಿಎಂ ಬಸವರಾಜ ಬೊಮ್ಮಾಯಿ ಅವರು ಸಹ ಯೋಜನೆಗೆ ಅನುಮೋದನೆ ನೀಡಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಸದನದಲ್ಲಿ ರಾಜ್ಯ ಸರ್ಕಾರದ ಪರವಾಗಿ ಅಭಿನಂದನೆ ಸಲ್ಲಿಸಿದ್ದಾರೆ.
Kalasa Banduri: Central government gives green signal to Kalasa Banduri Nala project…