ಕಳಸ : ಅವನತಿಯ ಅಂಚಿನಲ್ಲಿದೆ ಹೆಬ್ಬಾಳೆ ಸೇತುವೆ

1 min read
hebbale

ಕಳಸ : ಅವನತಿಯ ಅಂಚಿನಲ್ಲಿದೆ ಹೆಬ್ಬಾಳೆ ಸೇತುವೆ

ಚಿಕ್ಕಮಗಳೂರು : ಮಳೆಗಾಲದಲ್ಲಿ ದಿನಕ್ಕೆ ಆರೇಳು ಬಾರಿ ಮುಳುಗಡೆಯಾಗುವುದ ಕಳಸ ಸಮೀಪವಿರುವ ಹೆಬ್ಬಾಳೆ ಸೇತುವೆ ಕುಸಿಯುವ ಹಂತದಲ್ಲಿದ್ದು, ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ.

ಮಳೆಗಾಲದಲ್ಲಿ ಭದ್ರಾನದಿ ಉಕ್ಕಿ ಹರಿಯುತ್ತದೆ. ಹೀಗಾಗಿ ನದಿಗೆ ಅಡ್ಡಲಾಗಿ ಕಟ್ಟಿರುವ ಹೆಬ್ಬಾಳ ಸೇತುವೆ ಮುಳುಗಡೆಯಾಗುತ್ತದೆ. ಇದರಿಂದ ಸುತ್ತಮುತ್ತಲ ಹಳ್ಳಿಯ ಜನರು ಯಾರು ಎಲ್ಲಿಯೂ ಹೋಗದಂತಹ ಪರಿಸ್ಥಿತಿ ನಿರ್ಮಾಣವಾಗುತ್ತದೆ.

hebbale

ಸದ್ಯ ಸೇತುವೆಯು ಸಂಪೂರ್ಣ ಶಿಥಿಲಾವಸ್ಥೆಗೆ ತಲುಪಿದ್ದು, ಅವನತಿಯ ಅಂಚಿನಲ್ಲಿದೆ. ಸ್ಥಳೀಯರು ಈ ಕುರಿತು ಜನಪ್ರತಿನಿಧಿಗಳಿಗೆ ಹಾಗೂ ಜಿಲ್ಲಾಡಳಿತಕ್ಕೆ ಎಷ್ಟೇ ಬಾರಿ ಮನವಿ ಮಾಡಿದರು ಯಾವುದೇ ಪ್ರಯೋಜವಾಗಿಲ್ಲ. ಅದರಲ್ಲೂ ಹೊರನಾಡು ಅನ್ನಪೂರ್ಣೇಶ್ವರಿ ದೇವಾಲಯಕ್ಕೆ ಹೋಗುವವರು ಹೆಚ್ಚಾಗಿ ಇದೇ ಮಾರ್ಗವನ್ನ ಬಳಸುತ್ತಾರೆ. ಹೀಗಾಗಿ ಮುಂದಿನ ದಿನಗಳಲ್ಲಿ ಅನಾಹುತಗಳು ನಡೆಯುವ ಮೊದಲೇ ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಗಮನಹರಿಸಬೇಕು ಎಂದು ಸ್ಥಳೀಯರು ಮನವಿ ಮಾಡಿಕೊಂಡಿದ್ದಾರೆ.

chinthamani
ಜಾಹೀರಾತು

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd