ಬಳ್ಳಾರಿ: ಬಳ್ಳಾರಿಯಲ್ಲಿ ಅರಣ್ಯ ಸಚಿವ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಆನಂದ್ ಸಿಂಗ್ ಅವರು ಇಂದು ಕಲ್ಯಾಣ ಕರ್ನಾಟಕದ ಧ್ವಜಾರೋಹಣ ನೆರೆವೆರೆಸಿದರು. ಮುನ್ಸಿಪಲ್ ಹೈಸ್ಕೂಲ್ ಮೈದಾನದಲ್ಲಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಿತು. ಕಾರ್ಯಕ್ರಮದಲ್ಲಿ ಶಾಸಕ ಸೋಮಶೇಖರ್ ರೆಡ್ಡಿ, ಎಂಎಲ್ ಸಿ ಕೆ.ಸಿ ಕೊಂಡಯ್ಯ, ಅಲ್ಲಂ ವೀರಭದ್ರಪ್ಪ ಸೇರಿದಂತೆ ಹಲವರು ಭಾಗಿಯಾಗಿದ್ರು.
ಧ್ವಜಾರೋಹಣ ನೆರವೇರಿಸಿ ಬಳಿಕ ಕ್ಯಾಬಿನೆಟ್ ವಿಸ್ತರಣೆ ಬಗ್ಗೆ ಮಾತನಾಡಿದ ಸಚಿವರು ಸಿಎಂ ಯಡಿಯೂರಪ್ಪ ಅವರು ಕ್ಯಾಬಿನೆಟ್ ವಿಸ್ತರಣೆಗೆ ದೆಹಲಿಗೆ ಹೋಗುತ್ತಿಲ್ಲ. ರಾಜ್ಯದ ಅನುದಾನ, ಮಳೆ ಹಾನಿ ಬಗ್ಗೆ ಚರ್ಚೆ ನಡೆಸಲು ಹೋಗುತ್ತಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.
ಇದೇ ವೇಳೆ ವಿಜಯನಗರ ಪ್ರತ್ಯೇಕ ಜಿಲ್ಲೆ ವಿಚಾರವಾಗಿ ಮಾತನಾಡಿರುವ ಆನಂದ್ ಸಿಂಗ್ ಸೋಮಶೇಖರ್ ರೆಡ್ಡಿ ಅಣ್ಣ ನವರು ನಮಗೆ ಆಶಿರ್ವಾದ ನೀಡಿದ್ದಾರೆ. ನಮ್ಮ ಅರಣ್ಯ ಪ್ರದೇಶದಲ್ಲಿ ಗಾಂಜಾ ಬೆಳೆಯುತ್ತಿದ್ದಾರೆ. ಗಾಂಜಾ ಬೆಳೆದಿದ್ದು ಕಂಡು ಬಂದ್ರೆ ಕ್ರಮ ಕೈಗೊಳ್ಳಲು ರಾಜ್ಯದ 13 ಸರ್ಕಲ್ ನ ಎಲ್ಲಾ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಆದರೆ ಇದುವರೆಗೆ ಯಾವುದೇ ಪ್ರಕರಣಗಳು ಪತ್ತೆಯಾಗಿಲ್ಲಾ ಎಂದು ತಿಳಿಸಿದರು.