ಬಿಜೆಪಿಯವರಿಗೆ ಯಡಿಯೂರಪ್ಪ ಬಿಟ್ಟರೆ ಗತಿ ಇಲ್ಲ : ಖರ್ಗೆ
ಕಲಬುರಗಿ : ನಮ್ಮಲ್ಲಿ ಸಿಎಂ ಸ್ಥಾನಕ್ಕೆ ಅರ್ಹತೆ ಇರೋರು ಬಹಳ ಜನರಿದ್ದಾರೆ. ಹಾಗಾಗಿ ಈ ಚರ್ಚೆ ಕೇಳಿ ಬರುತ್ತಿದೆ. ಆದರೆ, ಬಿಜೆಪಿಯವರಿಗೆ ಯಡಿಯೂರಪ್ಪ ಬಿಟ್ಟರೆ ಗತಿ ಇಲ್ಲವೆಂದು ಎಂದು ಕೆಪಿಸಿಸಿ ವಕ್ತಾರ ಪ್ರಿಯಾಂಕ್ ಖರ್ಗೆ ಟೀಕೆ ಮಾಡಿದ್ದಾರೆ.
ಕಲಬುರಗಿಯಲ್ಲಿ ಜಮೀರ್ ಮುಂದಿನ ಸಿಎಂ ಹೇಳಿಕೆಗೆ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಿಯಾಂಕ್ ಖರ್ಗೆ, ಮುಂದಿನ ಸಿಎಂ ವಿಚಾರವಾಗಿ ನಮ್ಮ ಪಕ್ಷದ ಶಾಸಕ ಜಮೀರ್ ಅಹ್ಮದ್ ಅವರು ತಮ್ಮ ವೈಯಕ್ತಿಕ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಆದರೆ ಪಕ್ಷ ಕಟ್ಟುವ ಸಾಮಥ್ರ್ಯ, ಜವಾಬ್ದಾರಿ ಇರುವ ನಾಯಕ ಈರೀತಿ ಮಾತನಾಡೋದಿಲ್ಲ ಎಂದು ಜಮೀರ್ ಪರೋಕ್ಷವಾಗಿ ಟಾಂಗ್ ನೀಡಿದರು.
ಜಮೀರ್ ಅಹ್ಮದ್ ಖಾನ್ ಜವಾಬ್ದಾರಿ ಇರುವ ನಾಯಕರು ಹಾಗೂ ಯಾರಿಗೆ ನಾಲಿಗೆ ಮೇಲೆ ಹಿಡಿತ ಇರುತ್ತದೆಯೋ ಅವರು ಈ ರೀತಿ ಮಾತನಾಡೋದಿಲ್ಲ.
ಇದರಿಂದ ಮುಂದಿನ ಬಾರಿ ಅಧಿಕಾರ ಹಿಡಿಯುವ ಪಕ್ಷದ ಗುರಿಗೆ ಹಿನ್ನಡೆಯಾಗುತ್ತದೆ. ಮಾತನಾಡುವವರು ಇದನ್ನು ಅರಿತುಕೊಂಡು ಮಾತನಾಡಬೇಕು.
ನಮ್ಮ ಮಾತಿನಿಂದ ಬೇರೆ ಸಮಾಜ ಹಾಗೂ ಪಕ್ಷದ ಮೇಲೆ ಉಂಟಾಗುವ ಪರಿಣಾಮಗಳ ಬಗ್ಗೆ ಅರಿತುಕೊಂಡು ಮಾತನಾಡಬೇಕು ಎಂದು ಕುಟುಕಿದರು.