Kalburgi – ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಸ್ಥಳದಲ್ಲೇ ಇಬ್ಬರ ಸಾವು
ಎರಡು ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಸ್ಥಳದಲ್ಲಿಯೇ ಮೂವರು ಸಾವನ್ನಪ್ಪಿರುವ ಘಟನೆ ಕಲಬುರ್ಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಹೂವಿನಹಳ್ಳಿ ಬಳಿ ನಡೆದಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ಅಮರ ಎಂಬುವವರನ್ನು ಆಸ್ಪತ್ರಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮೃತರನ್ನ ಶಿರೋಳ್ಳಿ ಗ್ರಾಮದ ಜಗನ್ನಾಥ್ ಚಕ್ಕುಲಿ (35), ಮೇಹಬೂಬ್ ಅಲಿ (45) ಹಾಗೂ ಶಾದಿಪೂರ ಗ್ರಾಮದ ಶ್ರೀಕಾಂತ್ (30) ಎಂದು ಗುರುತಿಸಲಾಗಿದೆ. ಒಂದು ಬೈಕ್ ಚಿಂಚೋಳಿ ಕಡೆಗೆ ಹಾಗೂ ಇನ್ನೊಂದು ಬೈಕ್ ಸುಲೇಪೇಟ್ ಕಡೆಗೆ ಹೋಗುತ್ತಿರುವಾಗ ಈ ದುರ್ಘಟನೆ ಸಂಭವಿಸಿದೆ.
ಸದ್ಯ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರೀಶಿಲನೆ ನಡೆಸಿದ್ದು, ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಕುರಿತು ಸುಲೆಪೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
kalburgi- 3 dead and one injured after two bike accident in kalburgi