ಕಲಬುರಗಿ: ಲಂಚ ಪಡೆಯುತ್ತಿದ್ದ ಭ್ರಷ್ಟ ಅಧಿಕಾರಿಗಳಿಗೆ ಎಸಿಬಿ ಅಧಿಕಾರಿಗಳು ಶಾಕ್ ನೀಡಿದ್ದಾರೆ. ರೈತರಿಗೆ ನೀಡಿದ್ದ ಸಲಕರಣೆಗಳ ಬಿಲ್ ಪಾಸ್ ಮಾಡಲು 50 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ಜೇವರ್ಗಿ ಸಹಾಯಕ ಕೃಷಿ ನಿರ್ದೇಶಕ ಸುನೀಲಕುಮಾರ ಯರಗೋಳ ಎಸಿಬಿ ಬಲೆಗೆ ಬಿದ್ದಿದ್ದಾರೆ.
ಜೇವರ್ಗಿ ರೈತ ಶರಣಗೌಡ ಬಿಲ್ ಪಾಸ್ ಮಾಡಲು 1.50 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು. ಆ ಪೈಕಿ 50 ಸಾವಿರ ರೂಪಾಯಿ ಹಣ ಪಡೆಯುತ್ತಿದ್ದ ವೇಳೆ ನಗರದ ಕನ್ನಡ ಭವನದ ಬಳಿ ಎಸಿಬಿ ಡಿವೈಎಸ್ಪಿ ಮಹೇಶ ಮೇಘಣ್ಣವರ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿ ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ್ದಾರೆ.