Kalburgi : ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ತಾಯಿ, ಇಬ್ಬರು ಮಕ್ಕಳು ಸಾವು….
ನಿನ್ನೆ ರಾತ್ರಿ ಸುರಿದ ಧಾರಾಕಾರ ಮಳೆಗೆ ವಿದ್ಯುತ್ ವೈರ್ ತುಂಡಾಗಿ ಬಿದ್ದಿದ್ದು, ವಿದ್ಯುತ್ ತಗುಲಿದ ಪರಿಣಾಮ ಒಂದೇ ಕುಟುಂಬದ ತಾಯಿ ಮತ್ತು ಇಬ್ಬರು ಮಕ್ಕಳು ಮೃತಪಟ್ಟು, ತಂದೆ ಗಂಭೀರವಾಗಿ ಗಾಯಗೊಂಡ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ.
ಮೃತರನ್ನು ಝರಣಮ್ಮ (45), ಮಹೇಶ (18), ಸುರೇಶ (20) ಎಂದು ಗುರುತಿಸಲಾಗಿದೆ. ಚಿಂಚೋಳಿ ಪಟ್ಟಣದ ಧನಗರ ಗಲ್ಲಿಯಲ್ಲಿ ಶನಿವಾರ ರಾತ್ರಿ ಬಿರುಗಾಳಿ ಸಹಿತ ಸುರಿದ ಭಾರಿ ಮಳೆಗೆ ವಿದ್ಯುತ್ ತಂತಿ ತುಂಡಾಗಿ ನೆಲಕ್ಕೆ ಬಿದ್ದಿತ್ತು. ರಾತ್ರಿ ಮಳೆ ಜೋರಾದಾಗ ದನಗಳನ್ನ ಸ್ಥಳಾಂತರಿಸಲು ಕುಟುಂಬ ಮುಂದಾಗಿದೆ. ಈವೇಳೆ ಮನೆ ಮುಂದೆ ನಿಂತಿದ್ದ ನೀರಿನಲ್ಲಿ ವಿದ್ಯೂತ್ ತಂತಿ ತುಂಡಾಗಿ ಬಿದ್ದಿದ್ದರಿಂದ ವಿದ್ಯೂತ್ ಪ್ರವಹಿಸಿದೆ.
ಈ ವೇಳೆ ಕುಟುಂಬದ ನಾಲ್ವರಿಗೂ ವಿದ್ಯುತ್ ಶಾಕ್ ತಗುಲಿದ್ದು, ಘಟನೆಯಲ್ಲಿ ತಾಯಿ ಮತ್ತು ಮಕ್ಕಳು ಸಾವನ್ನಪ್ಪಿದ್ದಾರೆ. ತಂದೆ ಅಂಬಣ್ಣ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರಗೆ ದಾಖಲಿಸಲಾಗಿದೆ. ಚಿಂಚೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತ ಕುಟುಂಬಕ್ಕೆ ಪರಿಹಾರ ನೀಡುವಂತೆ ಜೆಸ್ಕಾಂ ಅಧಿಕಾರಿಗಳ ವಿರುದ್ಧ ಸಂಬಂಧಿಕರು ಮತ್ತು ಸ್ಥಳಿಯರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
Kalburgi: Mother, two children killed after being hit by a broken power line.