ಮೋದಿ ಒಂದು ಹೆಜ್ಜೆ ಹಿಂದೆ ಇಟ್ರೆ ಎರಡು ಹೆಜ್ಜೆ ಮುಂದೆ ಇಡ್ತಾರೆ : ಪ್ರಭಾಕರ್ ಭಟ್
ಉಡುಪಿ : ಪ್ರಧಾನಿ ನರೇಂದ್ರ ಮೋದಿ ಒಂದು ಹೆಜ್ಜೆ ಹಿಂದೆ ಇಟ್ಟಿದ್ದಾರೆ ಎಂದರೆ ಎರಡು ಹೆಜ್ಜೆ ಮುಂದಕ್ಕೆ ಇಡುತ್ತಾರೆ ಎಂದು ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿದ್ದಾರೆ.
ಕೇಂದ್ರ ಸರ್ಕಾರ ಕೃಷಿ ಮಸೂದೆಗಳನ್ನು ವಾಪಸ್ ಪಡೆದ ಬಗ್ಗೆ ಉಡುಪಿಯಲ್ಲಿ ಮಾತನಾಡಿದ ಅವರು, ಒಂದು ಒಳ್ಳೆಯ ಮಸೂದೆಯನ್ನು ವಾಪಸ್ ಪಡೆದುಕೊಳ್ಳಲಾಗಿದೆ.
ಸಣ್ಣಪುಟ್ಟ ತಿದ್ದುಪಡಿಯೊಂದಿಗೆ ಮತ್ತೆ ಕೃಷಿ ಮಸೂದೆ ಮಂಡನೆ ಮಾಡಿಯೇ ಮಾಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮೋದಿ ಅವರು ಸಣ್ಣಪುಟ್ಟ ತಿದ್ದುಪಡಿಯೊಂದಿಗೆ ಮತ್ತೆ ಮಂಡನೆ ಮಾಡಿಯೇ ಮಾಡುತ್ತಾರೆ. ಕೂತು ಚರ್ಚಿಸಲು ಹೋರಾಟಗಾರರು ತಯಾರಿರಲಿಲ್ಲ.
ನಮ್ಮ ದೇಶದಲ್ಲಿ ವಿಪಕ್ಷಗಳು ವಿರೋಧ ಪಕ್ಷಗಳಾಗಿವೆ. ಕೇಂದ್ರ ಸರ್ಕಾರ ಮತ್ತೆ ರೈತರ ಜೊತೆ ಚರ್ಚಿಸಲಿದೆ.
ಸರ್ಕಾರದ ಜೊತೆ ಚರ್ಚಿಸದೆ ವಿರೋಧಿಸುವುದು ಪ್ರಜಾಪ್ರಭುತ್ವವೇ? ಎಂದು ಪ್ರಶ್ನೆ ಮಾಡಿದರು.
ಇದೇ ವೇಳೇ ಚುನಾವಣೆಗಾಗಿ ಕಾಯ್ದೆಗಳನ್ನು ವಾಪಸ್ ಪಡೆಯಲಾಗಿದೆ ಎಂಬ ಆರೋಪದ ಬಗ್ಗೆ ಮಾತನಾಡಿ, ರಾಜಕೀಯ ಲಾಭದ ಉದ್ದೇಶದಿಂದ ಕಾಯಿದೆಯನ್ನು ವಾಪಸ್ ಪಡೆದಿದ್ದಲ್ಲ. ರಾಷ್ಟ್ರೀಯ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ವಾಪಾಸ್ ಪಡೆಯಲಾಗಿದೆ ಎಂದರು.