ಹೈದರಾಬಾದ್ ಸಂಸ್ಥಾನದಿಂದ ವಿಮೋಚನೆ ಹೊಂದಿದ್ದ ಕಾರಣಕ್ಕೆ ಸೆ.17 ಅನ್ನು ವಿಮೋಚನಾ ದಿನಾಚರಣೆಯಾಗಿ ಆಚರಿಸಲಾಗುತ್ತಿದೆ.
ಸಂವಿಧಾನದ ಅನುಚ್ಛೇದ 371 (ಜೆ) ತಿದ್ದುಪಡಿಗೊಂಡು ಅನುಷ್ಠಾನಗೊಂಡಿರುವ ದಶಮಾನೋತ್ಸವ ಕೂಡ ಈ ವೇಳೆ ಆಚರಿಸಲಾಗುತ್ತಿದೆ.
ಈ ಗಳಿಗೆಯಲ್ಲಿ ಭಾಗವಹಿಸಲು ಸಿಎಂ ಸಿದ್ದರಾಮಯ್ಯ ಅವರು ಕಲಬುರಗಿಗೆ ತೆರಳಿದ್ದಾರೆ. ನಗರದಲ್ಲಿರುವ ಸರ್ದಾರ್ ವಲ್ಲಭಭಾಯಿ ಪಟೇಲ್ ಪುತ್ಥಳಿಗೆ ಮಾಲೆ ಹಾಕಿ ಗೌರವ ನಮನ ಸಲ್ಲಿಸುವರು. ಅಲ್ಲಿಂದ ನೇರವಾಗಿ ಪೊಲೀಸ್ ಪೆರೇಡ್ ಮೈದಾನಕ್ಕೆ ತೆರಳಿ ಜಿಲ್ಲಾಡಳಿತ ಆಯೋಜಿಸಿರುವ ವಿಮೋಚನಾ ದಿನಾಚರಣೆಯ ಮುಖ್ಯ ಸಮಾರಂಭದಲ್ಲಿ ಭಾಗವಹಿಸಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಲಿದ್ದಾರೆ.
ಈ ವೇಳೆ ಮುಖ್ಯಮಂತ್ರಿಗಳು ಹೆಲ್ತ್ ಎಟಿಎಂ ಯೋಜನೆಗೆ ಚಾಲನೆ ನೀಡಲಿದ್ದಾರೆ. ಶಾಸಕ ಎಂ.ವೈ. ಪಾಟೀಲ್ ಪುತ್ರ ಡಾ. ಸಂಜು ಪಾಟೀಲ್, ಅಂಬಿಕಾ ನಿರ್ಮಿಸಿರುವ ಶಾಂತಾ ಆಸ್ಪತ್ರೆಯ ಉದ್ಘಾಟನೆ ನೆರವೇರಿಸಲಿದ್ದಾರೆ.