Kalyani : ರಸ್ತೆ ಅಪಘಾತದಲ್ಲಿ ಕಿರುತೆರೆ ನಟಿ ಸಾವು
ನಟಿ ಕಲ್ಯಾಣಿ ನವೆಂಬರ್ 12 ರ ಸಂಜೆ ಮನೆಗೆ ತೆರಳುತ್ತಿದ್ದಾಗ ಸಾಂಗ್ಲಿ-ಕೊಲ್ಲಾಪುರ ಹೆದ್ದಾರಿಯ ಡಿವೈಡರ್ ಬಳಿ ಈ ರಸ್ತೆ ಅಪಘಾತ ಸಂಭವಿಸಿದೆ.. ಈ ಸಂಬಂಧ ಕೊಲ್ಲಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ..
ಅಪಘಾತ ಸಂಭವಿಸಿದ ನಂತರ ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.. ಆದ್ರೆ ಅವರು ಬುದಕುಳಿಯಲಿಲ್ಲ.. ದ್ವಿಚಕ್ರ ವಾಹನದಲ್ಲಿದ್ದ ತೆರಳುತ್ತಿದ್ದ ವೇಳೆ ಕಾಂಕ್ರೀಟ್ ಮಿಕ್ಸರ್ ಟ್ರ್ಯಾಕ್ಟರ್ ಗೆ ಡಿಕ್ಕಿ ಹೊಡೆದಿದೆ.
ಸದ್ಯ ಟ್ರ್ಯಾಕ್ಟರ್ ಚಾಲಕನ ವಿರುದ್ಧ ಕೊಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.