ಚೆನ್ನೈ: ಕಾಲಿವುಡ್ ನ ಸ್ಟಾರ್ ನಟ ಕಮಲ್ ಹಾಸನ್ ಅವರಿಗೆ ಕೆಲ ದಿನಗಳ ಹಿಂದಷ್ಟೇ ಕೋವಿಡ್ ಪಾಸಿಟಿವ್ ಬಂದಿತ್ತು.. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿರುವ ಕಮಲ್ ಹಾಸನ್ 2 ವಾರಗಳ ಬಳಿಕ ಚೆನ್ನೈನ ಶ್ರೀ ರಾಮಚಂದ್ರ ವೈದ್ಯಕೀಯ ಕೇಂದ್ರದಿಂದ ಡಿಸ್ಚಾರ್ಜ್ ಆಗಿದ್ದಾರೆ. ಕಮಲ್ ಹಾಸನ್ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಕುರಿತ ಮಾಹಿತಿಯನ್ನು ತಮ್ಮ ಟ್ವಿಟ್ಟರ್‌ನಲ್ಲಿ ಶೇರ್ ಮಾಡಿಕೊಂಡಿದ್ದಾರೆ.
ನವೆಂಬರ್ 22 ರಂದು ಕಮಲ್ ಹಾಸನ್ ಅವರಿಗೆ ಕೊರೊನಾ ವೈರಸ್ ದೃಢಪಟ್ಟ ನಂತರ ಅವರು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನವೆಂಬರ್‍ನಲ್ಲಿ ಕಮಲ್ ಹಾಸನ್ ಅವರು ಯುಎಸ್‍ನ ಚಿಕಾಗೋದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದರು. ನಂತರ ಹಿಂದಿರುಗಿದ ಬಳಿಕ ಅವರಿಗೆ ಸ್ವಲ್ಪ ಕೆಮ್ಮು ಕಾಣಿಸಿಕೊಂಡಿತ್ತು. ಅವರು ಎರಡು ವಾರಗಳ ಕಾಲ ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿದ್ದರು.
ಧೋನಿ ಜೊತೆಗಿನ ಬ್ರೇಕಪ್ ಬಗ್ಗೆ ಬಾಯ್ಬಿಟ್ಟ ಲಕ್ಷ್ಮೀ
ಅಲ್ಲದೇ ಡಿಸ್ಚಾರ್ಜ್ ಆದ ಬೆನ್ನಲ್ಲೇ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನ ಪಾಲಿಸುವಂತೆ ಸಲಹೆ ನೀಡಿದ್ದಾರೆ.. ಮುನ್ನೆಚ್ಚರಿಕಾ ಕ್ಷಮಗಳು ನಮ್ಮನ್ನು ರಕ್ಷಿಸುತ್ತದೆ. ಅದನ್ನು ಮೀರಿ ಅಸ್ವಸ್ಥರಾದರೆ, ನಾವು ತೆಗೆದುಕೊಳ್ಳುವ ಕ್ರಮ ನಮ್ಮನ್ನು ತ್ವರಿತವಾಗಿ ಗುಣಪಡಿಸಬಹುದು. ನಾನು ಸದ್ಯ ಸೋಂಕಿನಿಂದ ಚೇತರಿಸಿಕೊಳ್ಳುತ್ತಿದ್ದೇನೆ ಎಂದು ತಿಳಿಸಿದ್ದಾರೆ.