ಲಾಠಿ ಪ್ರಹಾರಕ್ಕೆ ಬ್ರೇಕ್ : ಕಮಲ್ ಪಂತ್ ಟ್ವೀಟ್ lockdown
ಬೆಂಗಳೂರು : ಲಾಕ್ ಡೌನ್ ಇದ್ದರೂ ರಸ್ತೆಗಿಳಿದವರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದು, ಜನರು ಪೊಲೀಸರ ಮೇಲೆ ಆಕ್ರೋಶ ಹೊರಹಾಕುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಆಯುಕ್ತ ಕಮಲ್ ಪಂತ್, ಸಾರ್ವಜನಿಕರ ಮೇಲೆ ಪೊಲೀಸರು ಯಾವುದೇ ರೀತಿಯ ಬಲಪ್ರಯೋಗ ಮಾಡಬಾರದು ಸೂಚಿಸಿದ್ದಾರೆ.
ಈ ಕುರಿತು ಟ್ವೀಟ್ ಮೂಲಕ ಮಾಹಿತಿ ನೀಡಿರುವ ಕಮಲ್ ಪಂತ್, ಒಂದು ವೇಳೆ ಸಾರ್ವಜನಿಕರು ಲಾಕ್ ಡೌನ್ ಮಾರ್ಗಸೂಚಿ ಉಲ್ಲಂಘಿಸಿದ್ದು ಕಂಡುಬಂದಲ್ಲಿ ಮಾತ್ರ ಕಾನೂನಿನ ಅಡಿಯಲ್ಲಿ ಬೆಂಗಳೂರು ನಗರ ಪೊಲೀಸ್ ಸಿಬ್ಬಂದಿ ಕ್ರಮ ಕೈಗೊಳ್ಳಬೇಕು ಹೊರತು ಬೇರೆ ಯಾವುದೇ ರೀತಿಯ ಬಲಪ್ರಯೋಗ ಮಾಡಬಾರದು ಎಂಬ ಸೂಚನೆ ನೀಡಲಾಗಿದೆ. ಮನೆಯಲ್ಲೇ ಇರಿ, ಸುರಕ್ಷಿತವಾಗಿರಿ. ಕೊರೊನ ಹರಡುವುದನ್ನು ತಡೆಯಲು ದಯವಿಟ್ಟು ಸಹಕರಿಸಿ.
ಅಷ್ಟೇ ಅಲ್ಲದೆ, ಲಾಕ್ ಡೌನ್ ಜಾರಿಯಾಗಿರುವ ಸಮಯದಲ್ಲಿ ಸರ್ಕಾರದ ಮಾರ್ಗಸೂಚಿಯ ಪ್ರಕಾರ ಒಪ್ಪಿಗೆ ನೀಡಲಾದ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಅಥವಾ ಕೆಲಸದ ಸ್ಥಳಕ್ಕೆ ಪ್ರಯಾಣಿಸುವ ಸಂದರ್ಭದಲ್ಲಿ ಯಾವುದೇ ಸಮಸ್ಯೆಗಳಾದಲ್ಲಿ ಡಿಸಿಪಿ ಇಂಟಲಿಜೆನ್ಸ್ ಶ್ರೀ.ಸಂತೋಷ್ ಬಾಬು ಅವರನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 080-22942354 ಎಂದು ಸಲಹೆ ನೀಡಿದ್ದಾರೆ.