ಕಂಡಕಂಡವರ ಮೇಲೆ ಬೇಕಾಬಿಟ್ಟಿ ಲಾಠಿ ಪ್ರಹಾರ ಮಾಡುವಂತಿಲ್ಲ : ಕಮಲ್ ಪಂತ್
ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ಸರ್ಕಾರ ಲಾಕ್ ಡೌನ್ ವಿಧಿಸಿದೆ.. ಈ ನಡುವೆ ಹೊರಗಡೆ ಸುಖಾಸುಮ್ಮನೆ ಓಡಾಡುತ್ತಿರುವುದು , ವಾಹನದಲ್ಲಿ ಸಂಚಾರ ಮಾಡುತ್ತಿರುವವರು ಕಂಡು ಬಂದಲ್ಲಿ ಪೊಲೀಸರು ಅಂತಹವರ ಮೇಲೆ ಲಾಠಿ ಪ್ರಹಾರ ಮಾಡಿರುವ ಪ್ರಕರಣಗಳು ಬೆಳಕಿಗೆ ಬಂದಿದೆ.. ಆದ್ರೆ ಇನ್ನೂ ಹೆಲವೆಡೆ ಪೊಲೀಸರು ಬೇಕಾಬಿಟ್ಟಿಯಾಗಿ ಲಾಠಿ ಪ್ರಹಾರ ನಡೆಸಿರುವಂತಹ ವಿಡಿಯೋಗಳು ವೈರಲ್ ಆಗಿದ್ದು, ಪೊಲೀಸರ ವಿರುದ್ಧ ನೆಟ್ಟಿಗರು ತೀವ್ರ ಆಕ್ರೋಶ ಹೊರಹಾಕಿದ್ದಾರೆ.
ಆದ್ರೆ ಇನ್ಮುಂದೆ ಕಂಡ ಕಂಡವರ ಮೇಲೆ ಬೇಕಾಬಿಟ್ಟಿ ಲಾಠಿ ಪ್ರಹಾರಕ್ಕೆ ಬ್ರೇಕ್ ಹಾಕಲಾಗಿದೆ. ಪೊಲೀಸ್ ಅಧಿಕಾರಿಗಳಿಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಸೂಚನೆ ನೀಡಿದ್ದಾರೆ. ಟ್ವಿಟರ್ ನಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಲಾಕ್ಡೌನ್ ಗೈಡ್ಲೈನ್ಸ್ ಮೀರಿದರೆ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಒಂದು ವೇಳೆ ಸಾರ್ವಜನಿಕರು ಲಾಕ್ಡೌನ್ ಮಾರ್ಗಸೂಚಿ ಉಲ್ಲಂಘಿಸಿದ್ದು, ಕಂಡುಬಂದಲ್ಲಿ ಮಾತ್ರ ಕಾನೂನಿನ ಅಡಿಯಲ್ಲಿ ಬೆಂಗಳೂರು ಪೊಲೀಸ್ ಸಿಬ್ಬಂದಿ ಕ್ರಮ ಕೈಗೊಳ್ಳಬೇಕೆ ಹೊರತು ಬೇರೆ ಯಾವುದೇ ರೀತಿಯ ಬಲಪ್ರಯೋಗ ಮಾಡಬಾರದು ಎಂಬ ಸೂಚನೆ ನೀಡಲಾಗಿದೆ. ಮನೆಯಲ್ಲಿ ಸುರಕ್ಷಿತವಾಗಿರಿ, ಕೊರೋನಾ ಹರಡುವುದನ್ನು ತಡೆಯಲು ದಯವಿಟ್ಟು ಸಹಕರಿಸಿ ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.








