kamalnath
ಮಧ್ಯಪ್ರದೇಶ : ಮಧ್ಯಪ್ರದೇಶದ ಸಚಿವೆ ಇಮರ್ತಿ ದೇವಿ ಅವರನ್ನು ಮಾಜಿ ಸಿಎಂ ಕಮಲನಾಥ್ ಅವರು ಐಟಂ ಎಂದು ಕರೆಯುವ ಮೂಲಕ ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ. ದಬ್ರಾ ಕ್ಷೇತ್ರದಿಂದ ಮೂರು ಬಾರಿ ಕಾಂಗ್ರೆಸ್ ಶಾಸಕಿಯಾಗಿ ಆಯ್ಕೆಯಾಗಿರುವ ಇಮರ್ತಿ ದೇವಿ ಸದ್ಯ ಶಿವರಾಜ್ ಸಿಂಗ್ ಚೌಹಾಣ್ ಸಂಪುಟದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆಯಾಗಿದ್ದಾರೆ.
ಹಾಲಿ ಕ್ಷೇತ್ರದಿಂದ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿದ್ದಾರೆ. ಇತ್ತ ಕಮಲನಾಥ್ ಹೇಳಿಕೆ ಬೆನ್ನಲ್ಲೇ ಬಿಜೆಪಿ ನಿಯೋಗ ಭೋಪಾಲ್ ನಲ್ಲಿ ಚುನಾವಣಾ ಆಯೋಗದ ಅಧಿಕಾರಿಗಳನ್ನು ಭೇಟಿ ಮಾಡಿದ್ದಾರೆ. ಕಮಲನಾಥ್ ಮಹಿಳೆ ಮತ್ತು ದಲಿತರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ದೂರು ನೀಡಿದೆ.
ನಿನ್ನೆ ದಬ್ರಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸುರೇಶ್ ರಾಜೆ ಪರ ಮತ ಯಾಚನೆ ಮಾಡುತ್ತಾ ಮಾತನಾಡಿದ ಕಮಲ್ ನಾಥ್, ನಮ್ಮ ಅಭ್ಯರ್ಥಿ ಸುರೇಶ್ ರಾಜೆ ಸರಳ ಮನುಷ್ಯ, ಆಕೆಯಂಥಲ್ಲ, ಆಕೆಯ ಹೆಸರೇನು, ನಿಮಗೆಲ್ಲಾ ಆಕೆಯ ಬಗ್ಗೆ ನನಗಿಂತ ಚೆನ್ನಾಗಿ ಗೊತ್ತಿದೆ, ನೀವೆಲ್ಲಾ ಆಕೆಯ ಬಗ್ಗೆ ಮೊದಲೇ ಸೂಚನೆ ನೀಡಬೇಕಿತ್ತು, ಎಂತಹ ಐಟಂ ಎಂದು ಹೇಳಿದ್ದರು.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಸಿಎಂ ಶಿವರಾಜ್ ಸಿಂಗ್ ಚೌಹಾಣ್, ಹಿರಿಯ ರಾಜಕಾರಿಣಿಯಾಗಿ ಕಮಲ್ ನಾಥ್ ಅವರ ಹೇಳಿಕೆ ಆಘಾತವನ್ನುಂಟುಮಾಡಿದೆ. ನಮ್ಮ ಸಂಪುಟದ ಸಚಿವೆ ಅದರಲ್ಲೂ ಮಹಿಳೆ ಬಗ್ಗೆ ಈ ರೀತಿ ಮಾತನಾಡಿರುವುದು ನಿಜಕ್ಕೂ ನಾಚಿಕೆಗೇಡಿನ ಸಂಗತಿ ಎಂದು ಆಕ್ರೋಶ ಹೊರಹಾಕಿದ್ದಾರೆ.
ಉತ್ತರ ಕರ್ನಾಟಕ ಪ್ರವಾಹದಿಂದ 3 ಸಾವಿರ ಕೋಟಿ ರೂ.ನಷ್ಟ : ಸಚಿವ ಆರ್. ಅಶೋಕ್
kamalnath
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel