ADVERTISEMENT
Wednesday, August 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

Kambḷihuḷa-ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಂದ ‘ಕಂಬ್ಳಿಹುಳ’ ಟ್ರೇಲರ್ ಬಿಡುಗಡೆ

Kambḷihuḷa-ನವೆಂಬರ್ 4ಕ್ಕೆ ಸಿನಿಮಾ ರಿಲೀಸ್- ಟ್ರೇಲರ್ ಬಿಡುಗಡೆ ಮಾಡಿ ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ ಸಿನಿಮಾ ಮಾಯಾಜಗತ್ತು ಸಿಹಿ ಕಹಿ ಎಲ್ಲವೂ ಇದರಲ್ಲಿರುತ್ತೆ.

Ranjeeta MY by Ranjeeta MY
October 21, 2022
in Cinema, News, ಮನರಂಜನೆ
Share on FacebookShare on TwitterShare on WhatsappShare on Telegram

 

Kambḷihuḷa-ಸಿನಿಮಾರಂಗ ಬಹಳ ಬೇಗ ಎಲ್ಲರನ್ನು ಆಕರ್ಷಿಸುತ್ತೆ. ಕೆಲವರಿಗೆ ನಟರಾಗುವ ಆಸೆ, ಇನ್ನೂ ಕೆಲವರಿಗೆ ನಿರ್ದೇಶಕರಾಗುವ, ಕಲಾವಿದರಾಗುವ ಆಸೆ. ಒಟ್ಟಿನಲ್ಲಿ ಬಣ್ಣದ ಲೋಕದಲ್ಲಿ ಏನಾದರೂ ಸಾಧಿಸುವ ಕನಸು. ಆ ಕನಸುಗಳುಳ್ಳ ಸಿನಿಮಾ ಪ್ರೀತಿಯುಳ್ಳ ಒಂದಿಷ್ಟು ಸಮಾನ ಮನಸ್ಕರು ಸೇರಿ ಮಾಡಿರುವ ನವಿರಾದ ಪ್ರೇಮಕಥೆಯುಳ್ಳ ಚಿತ್ರ ‘ಕಂಬ್ಳಿಹುಳ’. ಟೈಟಲ್ ಮೂಲಕವೇ ಚಂದನವನ ಹಾಗೂ ಸಿನಿರಸಿಕರ ಮನಸ್ಸಲ್ಲಿ ಒಂದಿಷ್ಟು ಕುತೂಹಲ ಮೂಡಿಸಿದೆ. ಚೆಂದದ ಹಾಡಿನ ಮೂಲಕ ಎಲ್ಲರ ಗಮನ ತನ್ನತ್ತ ಸೆಳೆದ ಚಿತ್ರತಂಡವೀಗ ಟ್ರೇಲರ್ ಬಿಡುಗಡೆ ಮಾಡಿದೆ. ಗೃಹ ಸಚಿವ ಆರಗ ಜ್ಞಾನೇಂದ್ರ ಯುವ ಪ್ರತಿಭೆಗಳಿಗೆ ಬೆನ್ನುತಟ್ಟಿ ಚಿತ್ರದ ಭರವಸೆಯುಳ್ಳ ಟ್ರೇಲರ್ ಬಿಡುಗಡೆ ಮಾಡಿ ಶುಭ ಹಾರೈಸಿದ್ದಾರೆ. ಕಾರ್ಯಕ್ರಮದಲ್ಲಿ ನಟ ಪ್ರವೀಣ್ ತೇಜ್, ನಿರ್ದೇಶಕ ಸತ್ಯ ಪ್ರಕಾಶ್ ಭಾಗಿಯಾಗಿ ಚಿತ್ರತಂಡಕ್ಕೆ ಪ್ರೋತ್ಸಾಹ ನೀಡಿದ್ರು.

Related posts

‘Toxic’ ಗೆ ಮಂಜುನಾಥನ ಆಶೀರ್ವಾದ! ಧರ್ಮಸ್ಥಳಕ್ಕೆ ಬಂದ Rocking Star Yash

‘Toxic’ ಗೆ ಮಂಜುನಾಥನ ಆಶೀರ್ವಾದ! ಧರ್ಮಸ್ಥಳಕ್ಕೆ ಬಂದ Rocking Star Yash

August 26, 2026
ದೇಶೀಯ ಬಾಕ್ಸ್ ಆಫೀಸ್‌ನಲ್ಲಿ ‘ಟಾಕ್ಸಿಕ್’ ಸುನಾಮಿ; ಮುಂಗಡ ಬುಕ್ಕಿಂಗ್‌ನಲ್ಲೇ ₹35 ಕೋಟಿ ದಾಟಿದ ಕಲೆಕ್ಷನ್!

ದೇಶೀಯ ಬಾಕ್ಸ್ ಆಫೀಸ್‌ನಲ್ಲಿ ‘ಟಾಕ್ಸಿಕ್’ ಸುನಾಮಿ; ಮುಂಗಡ ಬುಕ್ಕಿಂಗ್‌ನಲ್ಲೇ ₹35 ಕೋಟಿ ದಾಟಿದ ಕಲೆಕ್ಷನ್!

August 25, 2026

ಟ್ರೇಲರ್ ಬಿಡುಗಡೆ ಮಾಡಿ ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ ಸಿನಿಮಾ ಮಾಯಾಜಗತ್ತು ಸಿಹಿ ಕಹಿ ಎಲ್ಲವೂ ಇದರಲ್ಲಿರುತ್ತೆ. ಒಂದು ಹೋರಾಟದ ಮನೋಭಾವ ಇದ್ದಾಗ ಮಾತ್ರ ಸಿನಿಮಾ ಮಾಡಲು ಸಾಧ್ಯ ಈ ಚಿತ್ರದ ನಿರ್ಮಾಪಕರಲ್ಲಿಯೂ ಅಂತಹದ್ದೊಂದು ಹೋರಾಟದ ಮನೋಭಾವ ಇದ್ದಿದ್ದರಿಂದ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಮಲೆನಾಡಿನ ಯುವಕರು ತಾವು ಬೆಳೆದಂತ ಊರು, ಪರಿಸರ, ಬದುಕು ಇವುಗಳ ಆಧಾರ ಮೇಲೆ ಕಥೆ ಕಟ್ಟಿ ಸಿನಿಮಾ ಮಾಡುತ್ತಾರೆ. ನೈಜತೆಯಿಂದ ಕೂಡಿರುವ ‘ಕಂಬ್ಳಿಹುಳ’ ಸಿನಿಮಾ ಟ್ರೇಲರ್ ನೋಡಿದಾಗ ನನಗೂ ಅದೇ ಅನಿಸಿದ್ದು, ಖಂಡಿತಾ ಸಿನಿಮಾ ಯಶಸ್ಸು ಆಗುತ್ತೆಂದು ಚಿತ್ರತಂಡಕ್ಕೆ ಪ್ರೋತ್ಸಾಹ ನೀಡಿದ್ರು.

ಕಿರುಚಿತ್ರಗಳನ್ನು ನಿರ್ದೇಶಿಸಿ ಅನುಭವವಿರುವ ನಿರ್ದೇಶಕ ನವನ್ ಶ್ರೀನಿವಾಸ್ ನಿರ್ದೇಶನದ ಮೊದಲ ಸಿನಿಮಾ ಇದು. ಮಲೆನಾಡು ಭಾಗದಲ್ಲಿ ನಡೆಯುವ ಕಥೆ ಚಿತ್ರದಲ್ಲಿದೆ. ಶೃಂಗೇರಿ, ಸಕಲೇಶಪುರ, ತೀರ್ಥಹಳ್ಳಿ, ಸುತ್ತಮುತ್ತ ‘ಕಂಬ್ಳಿಹುಳ’ ಚಿತ್ರೀಕರಣ ನಡೆಸಲಾಗಿದೆ. ಎಮೋಷನಲ್ ಜರ್ನಿ ಸಿನಿಮಾ ಇದಾಗಿದ್ದು ರಂಗಭೂಮಿ ಕಲಾವಿದ ಅಂಜನ್ ನಾಗೇಂದ್ರ ಹಾಗೂ ಅಶ್ವಿತಾ ಆರ್ ಹೆಗ್ಡೆ ಚಿತ್ರದ ನಾಯಕ, ನಾಯಕಿಯಾಗಿ ನಟಿಸಿದ್ದಾರೆ.

Saaksha Special-ಪುರುಷರು ಇಂದಿಗೂ ಮಾಡುತ್ತಿರುವ ಉಡುಗೆಯ ತಪ್ಪು ಶೈಲಿಗಳು

ಚಿತ್ರದ ನಿರ್ದೇಶಕ ನವನ್ ಶ್ರೀನಿವಾಸ್ ಮಾತನಾಡಿ ಇಡೀ ಸಿನಿಮಾ ತಂಡ ಹೊಸಬರಿಂದ ಕೂಡಿದ್ದರಿಂದ 90 ದಿನಗಳ ಕಾಲ ಚಿತ್ರೀಕರಣ ನಡೆಸಿದ್ದೇವು. ಇದೀಗ ಅಷ್ಟು ದಿನಗಳ ಶ್ರಮ ನವೆಂಬರ್ 4ರಂದು ತೆರೆ ಮೇಲೆ ಅನಾವರಣಗೊಳ್ಳುತ್ತಿದೆ. ಮಲೆನಾಡು ಭಾಗದಲ್ಲಿ ನಡೆಯುವ ಪ್ರೇಮಕಥೆ ಇದು. ನಾನು ಕೂಡ ಮಲೆನಾಡಿನವನಾದ್ದರಿಂದ ಈಸಿಯಾಗಿ ಹೇಳಬಹುದೆಂದು ಆ ಭಾಗದ ಕಥೆಯನ್ನೇ ಆಯ್ಕೆ ಮಾಡಿಕೊಂಡೆ. ಖಂಡಿತಾ ಸಿನಿಮಾ ಎಲ್ಲರಿಗೂ ಒಳ್ಳೆಯ ಫೀಲ್ ಕೊಡಲಿದೆ ಎಂದು ತಿಳಿಸಿದ್ರು.

ನಾಯಕ ಅಂಜನ್ ನಾಗೇಂದ್ರ ಮಾತನಾಡಿ ಕಂಬ್ಳಿಹುಳ ನನಗೆ ಹೊಸ ಜೀವನ ಕೊಟ್ಟಂತ ಸಿನಿಮಾ. ನಿರ್ದೇಶಕರಿಗೆ ನನಗೆ ಯಾವುದಾದರೂ ಪಾತ್ರ ಕೊಡಿ ಮಾಡುತ್ತೇನೆ ಎಂದಿದ್ದೆ ಒಂದಷ್ಟು ದಿನಗಳ ನಂತರ ಈ ಸಿನಿಮಾದಲ್ಲಿ ಹೀರೋ ಪಾತ್ರ ಮಾಡಬೇಕು ಎಂದ್ರು. ನಾನು ರಂಗಭೂಮಿ ಕಲಾವಿದನಾದ್ದರಿಂದ ಸಿನಿಮಾ ನಟನೆಗೆ ಹೊಂದಿಕೊಳ್ಳಲು ಒಂದಿಷ್ಟು ವರ್ಕ್ ಶಾಪ್ ಮಾಡಿ ನಟಿಸಿದ್ದೇನೆ. ಇಲ್ಲಿವರೆಗೆ ನಮ್ಮ ಸಿನಿಮಾಗೆ ಹೇಗೆ ಸಪೋರ್ಟ್ ಮಾಡಿದ್ದೀರಾ ಹಾಗೆಯೇ ಬಿಡುಗಡೆಯಾದ ಮೇಲು ಪ್ರೀತಿ ತೋರಿಸಿ ಪ್ರೋತ್ಸಹಿಸಿ ಎಂದ್ರು.

ಚಿತ್ರದ ನಾಯಕಿ ಅಶ್ವಿತಾ ಆರ್ ಹೆಗ್ಡೆ ಮಾತನಾಡಿ ಚಿತ್ರದಲ್ಲಿ ಮಲೆನಾಡಿನಲ್ಲಿ ವಾಸವಾಗಿರುವ ಮಲಯಾಳಿ ಹುಡುಗಿಯ ಪಾತ್ರ ನಿರ್ವಹಿಸುತ್ತಿದ್ದೇನೆ. ಮೂಲತಃ ನಾನು ರಂಗಭೂಮಿ ಕಲಾವಿದೆ. ನಮ್ಮೆಲ್ಲರಿಗೂ ಚಿತ್ರರಂಗ ಹೊಸತು. ಒಂದೊಳ್ಳೆ ಸಿನಿಮಾ ಮಾಡಿದ್ದೇವೆ. ಹೊಸಬರ ಸಿನಿಮಾ ನೋಡಿ ಹಾರೈಸಿ. ಅವಕಾಶ ನೀಡಿದ್ದಕ್ಕಾಗಿ ಚಿತ್ರದ ನಿರ್ದೇಶಕರಿಗೆ ನಾನು ಥ್ಯಾಂಕ್ಸ್ ಹೇಳುತ್ತೇನೆ ಎಂದು ತಿಳಿಸಿದ್ರು.

ಗ್ರೇ ಸ್ಕ್ವೇರ್ ಸ್ಟುಡಿಯೋಸ್ ಬ್ಯಾನರ್ ನಡಿ ನಿರ್ಮಾಣವಾಗಿರುವ ಈ ಚಿತ್ರ ನೈಜ ಘಟನೆಯಾಧಾರಿತ ಸಿನಿಮಾ. ಚಿತ್ರದಲ್ಲಿ ರೋಹಿತ್ ಕುಮಾರ್, ದೀಪಕ್ ರೈ ಪಣಜೆ, ಸಂಧ್ಯಾ ಅರಕೆರೆ, ಸಂಪತ್ ಶೆಟ್ಟಿ ಸೇರಿದಂತೆ ಹಲವು ಯುವ ಪ್ರತಿಭೆಗಳು ನಟಿಸಿದ್ದಾರೆ. ವಿಜಯ್, ಸವೀನ್, ಪುನೀತ್ ಹಾಗೂ ಗುರು ಚಿತ್ರಕ್ಕೆ ಬಂಡವಾಳ ಹೂಡಿದ್ದು, ಸತೀಶ್ ರಾಜೇಂದ್ರನ್ ಛಾಯಾಗ್ರಾಹಣ, ಜಿತೇಂದ್ರ ನಾಯಕ ಮತ್ತು ರಾಘವೇಂದ್ರ ಟಿಕೆ ಸಂಕಲನ, ಶಿವ ಪ್ರಸಾದ್ ಸಂಗೀತ ನಿರ್ದೇಶನ ‘ಕಂಬ್ಳಿಹುಳ’ ಚಿತ್ರಕ್ಕಿದೆ. ನವೆಂಬರ್ 4ರಂದು ಸಿನಿಮಾ ರಾಜ್ಯಾದ್ಯಂತ ತೆರೆ ಕಾಣುತ್ತಿದೆ.

Tags: Kamblihulakannada movekannada move . update sandlwoodSandalwodd
ShareTweetSendShare
Join us on:

Related Posts

‘Toxic’ ಗೆ ಮಂಜುನಾಥನ ಆಶೀರ್ವಾದ! ಧರ್ಮಸ್ಥಳಕ್ಕೆ ಬಂದ Rocking Star Yash

‘Toxic’ ಗೆ ಮಂಜುನಾಥನ ಆಶೀರ್ವಾದ! ಧರ್ಮಸ್ಥಳಕ್ಕೆ ಬಂದ Rocking Star Yash

by Shwetha
August 26, 2026
0

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ 'ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್' ಸಿನಿಮಾ ಇಂದು, ಆಗಸ್ಟ್ 26ರಂದು ವಿಶ್ವದಾದ್ಯಂತ ಬಿಡುಗಡೆಯಾಗುತ್ತಿದೆ. ಈ ವಿಶೇಷ ದಿನದ...

ದೇಶೀಯ ಬಾಕ್ಸ್ ಆಫೀಸ್‌ನಲ್ಲಿ ‘ಟಾಕ್ಸಿಕ್’ ಸುನಾಮಿ; ಮುಂಗಡ ಬುಕ್ಕಿಂಗ್‌ನಲ್ಲೇ ₹35 ಕೋಟಿ ದಾಟಿದ ಕಲೆಕ್ಷನ್!

ದೇಶೀಯ ಬಾಕ್ಸ್ ಆಫೀಸ್‌ನಲ್ಲಿ ‘ಟಾಕ್ಸಿಕ್’ ಸುನಾಮಿ; ಮುಂಗಡ ಬುಕ್ಕಿಂಗ್‌ನಲ್ಲೇ ₹35 ಕೋಟಿ ದಾಟಿದ ಕಲೆಕ್ಷನ್!

by Shwetha
August 25, 2026
0

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಹಾಗೂ ಗೀತು ಮೋಹನ್‌ದಾಸ್ ನಿರ್ದೇಶನದ ಬಹುನಿರೀಕ್ಷಿತ ಆಕ್ಷನ್ ಥ್ರಿಲ್ಲರ್ 'ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್' ಸಿನಿಮಾ ಬಿಡುಗಡೆಯ ಮುನ್ನವೇ...

ವಂದೇ ಮಾತರಂ ಗೀತೆಯ ಸಾಲುಗಳು ಏಕದೇವೋಪಾಸನೆಯನ್ನು ನಂಬುವವರ ಧಾರ್ಮಿಕ ಭಾವನೆಗೆ ವಿರುದ್ಧವಾಗಿರಬಹುದು ಎಂದ ಶರ್ಮಿಳಾ ಟ್ಯಾಗೋರ್ ವಾದಕ್ಕೆ ಕಂಗನಾ ರನೌತ್ ಖಡಕ್ ಉತ್ತರ

ವಂದೇ ಮಾತರಂ ಗೀತೆಯ ಸಾಲುಗಳು ಏಕದೇವೋಪಾಸನೆಯನ್ನು ನಂಬುವವರ ಧಾರ್ಮಿಕ ಭಾವನೆಗೆ ವಿರುದ್ಧವಾಗಿರಬಹುದು ಎಂದ ಶರ್ಮಿಳಾ ಟ್ಯಾಗೋರ್ ವಾದಕ್ಕೆ ಕಂಗನಾ ರನೌತ್ ಖಡಕ್ ಉತ್ತರ

by Shwetha
August 23, 2026
0

ನವದೆಹಲಿ: ಭಾರತದ ಸಾಂಸ್ಕೃತಿಕ ಪರಂಪರೆಯ ಅವಿಭಾಜ್ಯ ಅಂಗವಾಗಿರುವ ವಂದೇ ಮಾತರಂ ಗೀತೆಯ ಕುರಿತು ಹಿರಿಯ ನಟಿ ಶರ್ಮಿಳಾ ಟ್ಯಾಗೋರ್ ನೀಡಿರುವ ಹೇಳಿಕೆ ಈಗ ಬಾಲಿವುಡ್ ಮತ್ತು ರಾಜಕೀಯ...

ಕಣ್ಣಿಗೆ 3 ದೇಹಕ್ಕೆ 200 ಪೆಲೆಟ್ ಗುಂಡುಗಳು ಬಿದ್ದರೂ ಪೊಲೀಸರ ಮೌನವೇಕೆ? ಎಫ್ ಐಆರ್ ದಾಖಲಾಗುವವರೆಗೂ ಸ್ಥಳ ಬಿಟ್ಟು ಕದಲುವುದಿಲ್ಲ:ಪೊಲೀಸ್ ಠಾಣೆ ಎದುರು ರಾಹುಲ್ ಗಾಂಧಿ ಧರಣಿ

ಕಣ್ಣಿಗೆ 3 ದೇಹಕ್ಕೆ 200 ಪೆಲೆಟ್ ಗುಂಡುಗಳು ಬಿದ್ದರೂ ಪೊಲೀಸರ ಮೌನವೇಕೆ? ಎಫ್ ಐಆರ್ ದಾಖಲಾಗುವವರೆಗೂ ಸ್ಥಳ ಬಿಟ್ಟು ಕದಲುವುದಿಲ್ಲ:ಪೊಲೀಸ್ ಠಾಣೆ ಎದುರು ರಾಹುಲ್ ಗಾಂಧಿ ಧರಣಿ

by Shwetha
August 22, 2026
0

ನವದೆಹಲಿ: ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ದಾಳಿ ನಡೆಸಿದವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿರುವ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ದೆಹಲಿಯ ಸಂಸತ್ ಭವನ...

ನನ್ನ ಟ್ರೋಲ್ ಮಾಡಿದಷ್ಟು ಬ್ಯಾಂಕ್ ಬ್ಯಾಲೆನ್ಸ್ ಹೆಚ್ಚುತ್ತಿದೆ: ಕೋಟಿ ಕೊಟ್ಟರೂ ಸಿಗದ ಪ್ರಚಾರ- ಸೋಷಿಯಲ್ ಮೀಡಿಯಾ ವ್ಯಂಗ್ಯಕ್ಕೆ ವಿನಯ್ ಗೌಡ ಬಿಂದಾಸ್ ಉತ್ತರ

ನನ್ನ ಟ್ರೋಲ್ ಮಾಡಿದಷ್ಟು ಬ್ಯಾಂಕ್ ಬ್ಯಾಲೆನ್ಸ್ ಹೆಚ್ಚುತ್ತಿದೆ: ಕೋಟಿ ಕೊಟ್ಟರೂ ಸಿಗದ ಪ್ರಚಾರ- ಸೋಷಿಯಲ್ ಮೀಡಿಯಾ ವ್ಯಂಗ್ಯಕ್ಕೆ ವಿನಯ್ ಗೌಡ ಬಿಂದಾಸ್ ಉತ್ತರ

by Shwetha
August 22, 2026
0

ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 13ರ ಅಗ್ನಿಪರೀಕ್ಷೆ ಕಾರ್ಯಕ್ರಮದಲ್ಲಿ ಜ್ಯೂರಿಯಾಗಿ ಕಾಣಿಸಿಕೊಂಡಿರುವ ನಟ ವಿನಯ್ ಗೌಡ ಈಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿದ್ದಾರೆ. ತಮ್ಮ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram