ಬೆಂಗಳೂರು: ನಮ್ಮ ಮೆಟ್ರೋ (Namma Metro)ದಲ್ಲಿ ಸಂಚರಿಸುತ್ತಿದ್ದ ಯುವತಿಯರ ಅಂಗಾಂಗಳ ವಿಡಿಯೋ ಹಾಗೂ ಫೋಟೋ ತೆಗೆಯುತ್ತಿದ್ದ ಕಾಮುಕನನ್ನು ವಶಕ್ಕೆ ಪಡೆಯಲಾಗಿದೆ.
ಈ ಘಟನೆ ಜಯನಗರದಲ್ಲಿ (Jayanagar) ನಡೆದಿದೆ. ಆರೋಪಿಗೆ ಬಿಎಂಆರ್‌ಸಿಎಲ್ (BMRCL) 5 ಸಾವಿರ ರೂ. ದಂಡ ಕೂಡ ವಿಧಿಸಿದೆ. ಮಹೇಶ್ ಬಂಧಿತ ಆರೋಪಿ. ಬಂಧಿತ ಆರೋಪಿಯು ಮೆಟ್ರೋದಲ್ಲಿ ಪ್ರಯಾಣ ಮಾಡುವ ಮಹಿಳೆಯರ ಖಾಸಗಿ ಅಂಗಾಂಗಗಳ ಫೋಟೋ ಹಾಗೂ ವಿಡಿಯೋ ತೆಗೆಯುತ್ತಿದ್ದ. ಆರೋಪಿಯ ಮೊಬೈಲ್ ಪರಿಶೀಲನೆ ನಡೆಸಿದಾಗ ಸುಮಾರು 50ಕ್ಕೂ ಅಧಿಕ ಯುವತಿಯರ ವಿಡಿಯೋ ಮತ್ತು ಫೋಟೋಗಳು ಸಿಕ್ಕಿವೆ.
ಇತ್ತೀಚೆಗೆ ಮೆಜೆಸ್ಟಿಕ್ ನಿಂದ ಜೆಪಿ ನಗರ ಮೆಟ್ರೋ ಸ್ಟೇಷನ್‍ಗೆ ಯುವತಿಯೋರ್ವರು ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಈತ ವಿಡಿಯೋ ತೆಗೆದಿದ್ದಾನೆ. ಇದನ್ನು ಗಮನಿಸಿದ ಯುವತಿ, ಆತನಿಗೆ ಹೊಡೆದಿದ್ದಾಳೆ. ಈ ವೇಳೆ ನೈಟ್ ಡ್ಯೂಟಿ ಮುಗಿಸಿ ಮನೆಗೆ ಹೋಗುತ್ತಿದ್ದ ಇಬ್ಬರು ಸೆಕ್ಯೂರಿಟಿಗಳು ಯುವತಿಯ ಸಹಾಯಕ್ಕೆ ಬಂದಿದ್ದಾರೆ. ಆನಂತರ ಮಹೇಶ್ ನ ಕೃತ್ಯ ಬೆಳಕಿಗೆ ಬಂದಿದೆ.