ನಟಿ, ಸಂಸದೆ ಕಂಗನಾ ರಣಾವತ್ ಅಭಿನಯಿಸಿರುವ ‘ಎಮರ್ಜೆನ್ಸಿ’ (Emergency Film) ಚಿತ್ರಕ್ಕೆ ಕೇಂದ್ರೀಯ ಚಲನಚಿತ್ರ ಪ್ರಮಾಣೀಕರಣ ಮಂಡಳಿ ಪ್ರಮಾಣಪತ್ರ (CBFC) ನೀಡಿದೆ.
ಹೀಗಾಗಿ ಕಂಗನಾ ಚಿತ್ರಕ್ಕಾಗಿ ಕಾಯುತ್ತಿದ್ದವರಿಗೆ ಈಗ ಗುಡ್ ನ್ಯೂಸ್ ಸಿಕ್ಕಿದೆ. ಎಮರ್ಜೆನ್ಸಿ’ ಚಿತ್ರಕ್ಕೆ ಪ್ರಮಾಣಪತ್ರ ನೀಡಿರುವ ಕುರಿತು ಖುದ್ದು ಕಂಗನಾ (Kangana Ranaut) ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ನೀಡಿದ್ದಾರೆ. ನಮ್ಮ ಎಮರ್ಜೆನ್ಸಿ ಚಿತ್ರಕ್ಕೆ ಸೆನ್ಸಾರ್ ಪ್ರಮಾಣಪತ್ರ ಸ್ವೀಕರಿಸಿದ್ದೇವೆ ಎಂದು ತಿಳಿಸಲು ಖುಷಿಯಾಗುತ್ತಿದೆ. ಶೀಘ್ರದಲ್ಲಿಯೇ ಬಿಡುಗಡೆ ದಿನಾಂಕ ಪ್ರಕಟಿಸಲಾಗುವುದು. ನಿಮ್ಮೆ ತಾಳ್ಮೆ ಮತ್ತು ಬೆಂಬಲಕ್ಕಾಗಿ ಧನ್ಯವಾದಗಳು ಎಂದು ಕಂಗನಾ ಹೇಳಿದ್ದಾರೆ.
ಎಮರ್ಜೆನ್ಸಿ ಸಿನಿಮಾ ಜೂನ್ನಲ್ಲಿಯೇ ಬಿಡುಗಡೆ ಆಗಬೇಕಿತ್ತು. ಆದರೆ ಕಾರಣಾಂತರಗಳಿಂದ ಸಾಧ್ಯವಾಗಿರಲಿಲ್ಲ. ಈಗ ಸದ್ಯದಲ್ಲೇ ಹೊಸ ರಿಲೀಸ್ ಡೇಟ್ ಘೋಷಣೆ ಮಾಡುತ್ತೇವೆ ಎಂದು ನಟಿ ಹೇಳಿದ್ದಾರೆ. ಈ ಚಿತ್ರ ಇಂದಿರಾ ಗಾಂಧಿ (Indira Gandhi) ಜೀವನ ಆಧರಿಸಿದ ಚಿತ್ರವಾಗಿದೆ.