ಅತ್ಯಚಾರ ಆರೋಪಿ – ಕಂಗನಾ ಗನ್ ಮ್ಯಾನ್ ಮಂಡ್ಯದಲ್ಲಿ ಅರೆಸ್ಟ್
ಅತ್ಯಾಚಾರ ಆರೋಪದಲ್ಲಿ ಸಿಲುಕಿ ಕರ್ನಾಟಕದಲ್ಲಿ ತಲೆಮರೆಸಿಕೊಂಡಿದ್ದ ಬಾಲಿವುಡ್ ನಟಿ ಕಾಂಟ್ರವರ್ಸಿ ಕ್ವೀನ್ ಕಂಗನಾ ರಣಾವತ್ ಗನ್ ಮ್ಯಾನ್ ಕುಮಾರ್ ಹೆಗ್ಗಡೆಯನ್ನ ಮಂಡ್ಯದಲ್ಲಿ ಪೊಲೀಸರು ಬಂಧಿಸಿದ್ದಾರೆ. ಮೇಕಪ್ ಆರ್ಟಿಸ್ಟ್ ಜೊತೆ ಪ್ರೀತಿಯ ನಾಟಕವಾಡಿ ,ಆಕೆಯ ಜೊತೆ ಅನೇಕ ಬಾರಿ ಬಲವಂತವಾಗಿ ಲೈಂಗಿಕ ಸಂಪರ್ಕ ಬೆಳೆಸಿ ಹಣವನ್ನೂ ಪಡೆದು ಮುಂಬೈನಿಂದ ಕರ್ನಾಟಕ್ಕೆ ಬಂದು ಈತ ತಲೆ ಮರೆಸಿಕೊಂಡಿದ್ದಾಗಿ ಯುವತಿ ಕೇಸ್ ದಾಖಲಿಸಿದ್ದಳು.. ಇದೀಗ ಆರೋಪಿಯನ್ನ ಮುಂಬೈ ಪೊಲೀಸರು ಬಂಧಿಸಿದ್ದಾರೆ.
ಕೆ.ಆರ್.ಪೇಟೆ ತಾಲೂಕಿನ ಹೆಗ್ಗಡಹಳ್ಳಿ ಗ್ರಾಮದಲ್ಲಿ ಮುಂಬೈ ಪೊಲೀಸರು ಕಿಕ್ಕೇರಿ ಪೊಲೀಸ್ ಠಾಣೆಯ ಪೊಲೀಸರ ಸಹಾಯದೊಂದಿದೆ ಕುಮಾರ್ ಹೆಗ್ಡೆಯನ್ನು ಬಂಧಿಸಿದ್ದಾರೆ. ಮೂಲತಃ ಕೆ.ಆರ್.ಪೇಟೆ ತಾಲೂಕಿ ಹೆಗ್ಗಡಹಳ್ಳಿ ಗ್ರಾಮದ ಕುಮಾರ್ ಹೆಗ್ಡೆ, ಹಲವು ವರ್ಷಗಳಿಂದ ಮುಂಬೈನಲ್ಲಿ ಬಾಲಿವುಡ್ ನಟಿ ಕಂಗನಾ ರಣಾವತ್ ಬಾಡಿಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ.
ಸಂತ್ರಸ್ತ ಯುವತಿ ಮುಂಬೈನ ಅಂಧೇರಿ ಪೊಲೀಸ್ ಠಾಣೆಯಲ್ಲಿ ಕುಮಾರ್ ಹೆಗ್ಡೆ ವಿರುದ್ಧ ದೂರು ದಾಖಲು ಮಾಡಿದ್ದಳು. ಪೊಲೀಸರು ಕುಮಾರ್ ಹೆಗ್ಡೆ ಬಂಧನಕ್ಕೆ ಬಲೆ ಬೀಸಿದ್ದರು. ಕೊನೆಗೂ ಆರೋಪಿಯನ್ನ ಅರೆಸ್ಟ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಇದೀಗ ಆರೋಪಿಯನ್ನ ಮುಂಬೈಗೆ ಕರೆದೊಯ್ದು ವಿಚಾರಣೆಗೊಳಪಡಿಸಿದ್ಧಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.