ಕರ್ನಾಟಕ ಬಂದ್ ಕರೆ ಕೊಟ್ಟಿರುವ ಕನ್ನಡ ಪರ ಸಂಘಟನೆ ಅಹವಾಲನ್ನು ಸರ್ಕಾರ ಆಲಿಸಿದೆ. ಕನ್ನಡ ಭಾಷಾ ಮಾಧ್ಯಮ, ಕನ್ನಡ ಉಳಿಸುವ ಬೆಳೆಸುವ ನಿಟ್ಟಿನಲ್ಲಿ ಸರೋಜಿನಿ ಮಹಿಷಿ ವರದಿಯನ್ನ ಜಾರಿಗೆಗೊಳಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕøತಿ ಖಾತೆ ಸಚಿವ ಸಿ.ಟಿ.ರವಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಸಚಿವ ಸಿ.ಟಿ.ರವಿ, ಸರೋಜಿನಿ ಮಹಿಷಿ ವರದಿ ಜಾರಿಗೆ ನಮ್ಮ ಸರ್ಕಾರ ಬದ್ಧವಾಗಿದೆ. ಆದರೆ ಖಾಸಗಿ ವಲಯದಲ್ಲಿ ವರದಿ ಜಾರಿ ಸುಲಭವಲ್ಲ. ಕಾರ್ಮಿಕರ ಕೊರತೆ ಮತ್ತಿತರ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಹಾಗಾಗಿ ಖಾಸಗಿ ವಲಯದವರೊಂದಿಗೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ. ಶಿಕ್ಷಣದಲ್ಲಿ ಕನ್ನಡ ಮಾಧ್ಯಮ ಕಡ್ಡಾಯಗೊಳಿಸಲು ನಮ್ಮ ಸಮ್ಮತಿ ಇದೆ. ಶಿಕ್ಷಣದಲ್ಲಿ ಕನ್ನಡ ಕಡ್ಡಾಯಗೊಳಿಸದೆ ಆಡಳಿತದಲ್ಲಿ ಕನ್ನಡ ಕಡ್ಡಾಯಗೊಳಿಸಲು ಸಾಧ್ಯವಿಲ್ಲ ಎಂದು ಹೇಳಿದ ಸಚಿವರು, ಸುಪ್ರೀಂಕೋರ್ಟ್ನಲ್ಲಿ ಈ ಬಗ್ಗೆ ಪುನರ್ ಪರಿಶೀಲನಾ ಅರ್ಜಿ ಸಲ್ಲಿಕೆ ಸಾಧ್ಯವೇ ಎಂದು ಪರಿಶೀಲಿಸಲಾಗುತ್ತಿದೆ ಎಂದು ತಿಳಿಸಿದ್ರು.
ಇದೇ ವೇಳೆ ಮಾಜಿಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ಸಚಿವ ಸಿ.ಟಿ.ರವಿ, ಸರೋಜಿನಿ ಮಹಿಷಿ ವರದಿ ಜಾರಿಗೊಳಿಸುವಂತೆ ಸಿದ್ದರಾಮಯ್ಯ ಅವರು ಒತ್ತಾಯಿಸಿರುವುದು ಹಾಸ್ಯಾಸ್ಪದವಾಗಿದೆ. ಸರೋಜಿನಿ ಮಹಿಷಿ ವರದಿ ಮಂಡನೆಯಾದ ದಿನದಿಂದಲೂ ಸಿದ್ದರಾಮಯ್ಯ ಹಾಗೂ ಅವರು ಪ್ರತಿನಿಧಿಸುವ ಪಕ್ಷವೇ ಅಧಿಕಾರದಲ್ಲಿ ಇತ್ತು. ತಮ್ಮ ಆಡಳಿತಾವಧಿಯಲ್ಲಿ ಸರೋಜಿನಿ ವರದಿಯನ್ನ ಜಾರಿಗೆ ಯಾವುದೇ ಪ್ರಯತ್ನ ಮಾಡದೆ, ಇದೀಗಾ ಅಧಿಕಾರ ಕಳೆದುಕೊಂಡ ಮೇಲೆ ತಕ್ಷಣ ಸರೋಜಿನಿ ಮಹಿಷಿ ವರದಿ ಜಾರಿಗೆ ಒತ್ತಾಯಿಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ರು.