S. Narayan | “ಕಾಂಗ್ರೆಸ್” ಗೆ ಜೈ ಎಂದ ಎಸ್ ನಾರಾಯಣ್
ಕಾಂಗ್ರೆಸ್ ಬಾವುಟ ಹಿಡಿದ ಕಲಾ ಸಾಮ್ರಾಟ್
“ಕಾಂಗ್ರೆಸ್” ಗೆ ಜೈ ಎಂದ ಎಸ್ ನಾರಾಯಣ್
ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆ
ದೇಶಕ್ಕಾಗಿ ಕಾಂಗ್ರೆಸ್ ತ್ಯಾಗ ಬಲಿದಾನ ಕೊಟ್ಟಿದೆ
ಬೆಂಗಳೂರು : ಕಲಾ ಸಾಮ್ರಾಟ್ ಖ್ಯಾತಿಯ ನಿರ್ದೇಶಕ, ನಟ, ಎಸ್ ನಾರಾಯಣ್ ಅವರು ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ಬೆಂಗಳೂರು ನಗರದ ಕೆಪಿಸಿಸಿ ಕಚೇರಿಯಲ್ಲಿ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ಎಸ್.ನಾರಾಯಣ್ ಅವರು ಕಾಂಗ್ರೆಸ್ ಬಾವುಟ ಹಿಡಿದಿದ್ದಾರೆ.
ಇದೇ ವೇಳೆ ರಾಜ್ಯ ಶಿಕ್ಷಕರ ಸಂಘದ ಅಧ್ಯಕ್ಷ ತಿಮ್ಮಯ್ಯ ಪುರ್ಲೆ ಕೂಡ ಕಾಂಗ್ರೆಸ್ ಪಕ್ಷ ಸೇರಿಕೊಂಡರು.
ಕಾಂಗ್ರೆಸ್ ಸದಸ್ಯತ್ವ ಸ್ವೀಕರಿಸಿದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಎಸ್. ನಾರಾಯಣ್, ನಾನು ಕಳೆದ ಮೂರು ದಶಕಗಳಿಂದ ಸಿನಿಮಾ ಕ್ಷೇತ್ರದಲ್ಲಿ ಕೆಲಸ ಮಾಡಿದ್ದೇನೆ.
ಡಾ.ರಾಜ್ ಕುಮಾರ್, ಡಾ.ವಿಷ್ಣು ವರ್ಧನ್, ಅಂಬರೀಶ್ ಸೇರಿದಂತೆ ದೊಡ್ಡ ಸ್ಟಾರ್ ಗಳ ಜೊತೆ ಕೆಲಸ ಮಾಡಿದ್ದೇನೆ.
ಸಿನಿಮಾ ಜಗತ್ತು ನನಗೆ ಎಲ್ಲವನ್ನೂ ಕೊಟ್ಟಿದೆ. ಈ ನಡುವೆ ಬಹಳಷ್ಟು ಮಂದಿ ರಾಜಕೀಯ ಯಾಕೆ ಅಂತ ಪ್ರಶ್ನೆ ಮಾಡುತ್ತಿದ್ದಾರೆ. ಆ ಪ್ರಶ್ನೆ ಹಾಗೇ ಇರಲಿ ಮುಂದೆ ಉತ್ತರ ಸಿಗುತ್ತೆ ಎಂದರು.
ಇದೇ ವೇಳೆ 2023ರಕ್ಕೆ ಕಾಂಗ್ರೆಸ್ ಪಕ್ಷವನ್ನ ತರಬೇಕು ಎಂದ ಎಸ್.ನಾರಾಯಣ್, ನಾನು ಪಕ್ಷಕ್ಕಾಗಿ ದುಡಿಯುತ್ತೇನೆ,
ಕೊಟ್ಟ ಮಾತಿನಂತೆ ಕೆಲಸ ಮಾಡುತ್ತೇನೆ. ಕಾಂಗ್ರೆಸ್ ಪಕ್ಷ ದೇಶಕ್ಕಾಗಿ ತ್ಯಾಗ ಬಲಿದಾನಗಳನ್ನ ಮಾಡಿದೆ.
ಜಾತ್ಯಾತೀತ ಸಿದ್ದಾಂತಗಳು ಇಷ್ಟ ಆಯ್ತು. ಹಾಗಾಗಿ ನಾನು ಕಾಂಗ್ರೆಸ್ ಸೇರಿದೆ ಎಂದು ತಿಳಿಸಿದರು.
Kannada famous director s.narayan joined congress party