ಬೆಂಗಳೂರು: ವಾಣಿಜ್ಯ ಮಳಿಗೆಗಳ ಮೇಲೆ ಕನ್ನಡ ನಾಮಫಲಕ ಕಡ್ಡಾಯಕ್ಕೆ ಕರವೇ ಒತ್ತಾಯಿಸಿದೆ.
ಈಗಾಗಲೇ ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಶೇ. 60ರಷ್ಟು ಕನ್ನಡ (Kannada Board) ನಾಮಫಲಕ ಅಳವಡಿಸುವಂತೆ ಸರ್ಕಾರ ಸೂಚನೆ ನೀಡಿದ್ದರೂ ನಿರ್ಲಕ್ಷ್ಯ ವಹಿಸಿದವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಕಾರ್ಯಕರ್ತರು ಒತ್ತಾಯಿಸಿದ್ದಾರೆ.
ಈ ಸಂದರ್ಭದಲ್ಲಿ ಪ್ರಾಣ ಲೆಕ್ಕಿಸದೆ ಜಾಹೀರಾತು ಫಲಕ ಏರಿ ಇಂಗ್ಲಿಷ್‍ನಲ್ಲಿದ್ದ ಬೋರ್ಡ್ ಗಳನ್ನು ಹರಿದು ಹಾಕಿದ್ದಾರೆ.
ಕರವೇ ನಾರಾಯಣಗೌಡ (Karave Narayana Gowda) ಬಣದ ಕಾರ್ಯಕರ್ತರು ನಾಮಫಲಕ ಮಹಾ ಅಭಿಯಾನ ಆರಂಭಿಸಿದೆ.
ಫ್ಲೈ ಓವರ್ ಮೇಲೆ ನಿಂತು ಮಾಲ್ ಕಡೆಗೆ ಕೂಡ ಕಾರ್ಯಕರ್ತರು ಚಪ್ಪಲಿ ತೂರಿದ್ದಾರೆ. ಕನ್ನಡ ಇಲ್ಲದ ನಾಮಫಲಕಗಳಿಗೆ ಮಸಿ ಬಳಿದಿದ್ದಾರೆ. ನಾಮಫಲಕಗಳನ್ನು ಒಡೆದು ಹಾಕಿದ್ದಾರೆ. ಈ ಸಂದರ್ಭದಲ್ಲಿ ಪೊಲೀಸರು ಹಾಗೂ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ.