Kannada Rajyotsava | ಕನ್ನಡ ರಾಜ್ಯೋತ್ಸವ – ಕರ್ನಾಟಕ ರತ್ನ ಪ್ರಶಸ್ತಿಯ ಇತಿಹಾಸ
ರಾಜ್ಯಾದ್ಯಂತ ನವೆಂಬರ್ 1 ಕನ್ನಡ ರಾಜ್ಯೋತ್ಸವವನ್ನು ಬಹಳ ವಿಜೃಂಭಣೆಯಿಂದ ಆಚರಣೆ ಮಾಡಲಾಗುತ್ತಿದೆ.
ಈ ಬಾರಿ ರಾಜ್ಯ ಸರ್ಕಾರ ಕೋಟಿ ಕಂಠ ಗಾಯನ ಎನ್ನುವ ವಿಶಿಷ್ಟ ಕಾರ್ಯಕ್ರಮ ಮೂಲಕ 67 ನೇ ಕನ್ನಡ ರಾಜ್ಯೋತ್ಸವವನ್ನು ಆಚರಣೆ ಮಾಡಲಾಗುತ್ತಿದೆ.
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ಸರ್ಕಾರ ಇಂದು ಕರ್ನಾಟಕ ರತ್ನ ಪ್ರಶಸ್ತಿಯನ್ಉನ ಪ್ರದಾನ ಮಾಡಲಿದೆ.
ರಾಜ್ಯದಲ್ಲಿ ಈವರೆಗೂ ಎಂಟು ಜನರಿಗೆ ಈ ಪ್ರಶಸ್ತಿಯನ್ನು ನೀಡಲಾಗಿದ್ದು, ಈ ಗೌರವಕ್ಕೆ ಪಾತ್ರರಾಗುತ್ತಿರುವ 9ನೇ ರತ್ನ ಪುನೀತ್ ರಾಜ್ ಕುಮಾರ್.
ದೇಶದಲ್ಲಿ ಭಾರತ ರತ್ನವು ಅತ್ಯುನ್ನತ ನಾಗರಿಕ ಪ್ರಶಸ್ತಿಯಾಗಿದೆ.
ಅದೇ ರೀತಿ ಕರ್ನಾಟಕ ಸರ್ಕಾರವು 1992 ರಲ್ಲಿ ಕರ್ನಾಟಕ ರತ್ನ ಪ್ರಶಸ್ತಿಯನ್ನು ಅತ್ಯುನ್ನತ ನಾಗರಿಕ ಪ್ರಶಸ್ತಿ ಎಂದು ಘೋಷಣೆ ಮಾಡಿತು.
ಈ ಪ್ರಶಸ್ತಿಯು 50ಗ್ರಾಮ್ ತೂಕದ ಚಿನ್ನದ ಪದಕ, ಸನ್ಮಾನ ಪತ್ರ, ನೆನಪಿನ ಕಾಣಿಕೆ ಹಾಗೂ ಒಂದು ಶಾಲನ್ನು ಒಳಗೊಂಡಿದೆ.
ಕರ್ನಾಟಕ ರತ್ನ ಪ್ರಶಸ್ತಿ ಪುರಸ್ಕೃತರ ಪಟ್ಟಿ
ಕುವೆಂಪು – ಸಾಹಿತ್ಯ – 1992
ಡಾ. ರಾಜ್‌ಕುಮಾರ್ – ಚಲನಚಿತ್ರ – 1992
ಎಸ್.ನಿಜಲಿಂಗಪ್ಪ – ರಾಜಕೀಯ – 1999
ಸಿ.ಎನ್.ಆರ್.ರಾವ್ – ವಿಜ್ಞಾನ – 2000
ದೇವಿಪ್ರಸಾದ್ ಶೆಟ್ಟಿ – ವೈದ್ಯಕೀಯ – 2001
ಭೀಮಸೇನ ಜೋಷಿ – ಸಂಗೀತ – 2005
ಶ್ರೀ ಶಿವಕುಮಾರ ಸ್ವಾಮೀಗಳು – ಸಾಮಾಜಿಕ ಸೇವೆ – 2007
ದೇ. ಜವರೇಗೌಡ – ಸಾಹಿತ್ಯ -2008
ಡಿ. ವೀರೇಂದ್ರ ಹೆಗ್ಗಡೆ – ಸಾಮಾಜಿಕ ಸೇವೆ – 2009.
ದಿ. ಪುನೀತ್ ರಾಜ್‌ಕುಮಾರ್- ಸಿನಿಮಾ ಹಾಗೂ ಸಾಮಾಜಿಕ ಸೇವೆ -2021