ಕನ್ನಡ ರಾಜ್ಯೋತ್ಸವದ ಅಂಗವಾಗಿ ಹಲವು ಜಿಲ್ಲೆಗಳಲ್ಲಿ ಕೋಟಿಕಂಠ ಗಾಯನ….
ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿದ್ದ ಕೋಟಿಕಂಠ ಗಾಯನ ಕಾರ್ಯಕ್ರಮ ರಾಜ್ಯ ವಿವಿಧ ಜಿಲ್ಲೆಗಳಲ್ಲಿ ನಡೆಯಿತು. ಬೆಳಗಾವಿ ಜಿಲ್ಲೆಯ ಸುವರ್ಣಸೌಧದ ಮುಂಭಾಗದಲ್ಲಿ ಕೋಟಿಕಂಠ ಗಾಯನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಮುಜಾರಾಯಿ ಖಾತೆ ಸಚಿವೆ ಶಶಿಕಲಾ ಜೊಲ್ಲೆ, ಸಂಸದೆ ಮಂಗಳಾ ಅಂಗಡಿ, ಜಿಲ್ಲಾಧಿಕಾರಿ ನಿತೇಶ ಪಾಟೀಲ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಸಾಂಸ್ಕೃತಿಕ ನಗರಿ ಮೈಸೂರಿನ ಅರಮನೆ ಮುಂಭಾಗದಲ್ಲಿ ಆಯೋಜಿಸಿದ್ದ ಕೋಟಿ ಕಂಠ ಗಾಯನ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್, ಕನ್ನಡ ಗೀತೆಗಳ ಗಾಯನ ಮಾಡುವ ಮೂಲಕ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಸಂಸದ ಪ್ರತಾಪ್ ಸಿಂಹ, ಶಾಸಕರಾದ ಎಸ್.ಎ ರಾಮದಾಸ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಉಡುಪಿ ಜಿಲ್ಲೆಯ ಮಲ್ಪೆ ಸಮುದ್ರದ ಮಧ್ಯೆ ಕೋಟಿಕಂಠ ಗಾಯನ ಕಾರ್ಯಕ್ರಮವನ್ನು ವಿನೂತನವಾಗಿ ಆಯೋಜಿಸಲಾಗಿತ್ತು. ಮೀನುಗಾರ ಸಮುದಾಯದ ಮುಖಂಡರು ಸೇರಿದಂತೆ ಅನೇಕ ಕಲಾವಿದರು ಪಾಲ್ಗೊಂಡಿದ್ದರು. ಹತ್ತಾರು ಹಡಗುಗಳಲ್ಲಿ ಕನ್ನಡ ಬಾವುಟವನ್ನು ಹಾರಾಡಿಸುತ್ತಾ, ಸಮುದ್ರದ ಮಧ್ಯೆ ಮೀನುಗಾರರು, ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಕನ್ನಡ ಗೀತೆಗಳನ್ನು ಹಾಡುವ ಮೂಲಕ ಗಮನ ಸೆಳೆದರು.
Kannada: singing in many districts as part of Kannada Rajyotsava…








