ಕಳೆದುಹೋದ ಯುವರತ್ನನ ಆದರ್ಶಗಳಿಗೆ ಅಗ್ರಪೀಠ ಹಾಕಿ ನಮಿಸೋಣ

1 min read

ಕಳೆದುಹೋದ ಯುವರತ್ನನ ಆದರ್ಶಗಳಿಗೆ ಅಗ್ರಪೀಠ ಹಾಕಿ ನಮಿಸೋಣ

ಬೆಂಗಳೂರು : ನಮ್ಮೊಳಗೆ ಕನ್ನಡ ದೀಪವನ್ನು ಬೆಳಗುತ್ತಲೇ ಕಳೆದುಹೋದ ಯುವರತ್ನನ ಆದರ್ಶಗಳಿಗೆ ಅಗ್ರಪೀಠ ಹಾಕಿ ನಮಿಸೋಣ. ಆ ಮೂಲಕ ಪುನೀತರಾಗೋಣ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಕನ್ನಡ ರಾಜ್ಯೋತ್ಸವ ಅಂಗವಾಗಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಜಗತ್ತಿನ ಸಮಸ್ತ ಕನ್ನಡಿಗರಿಗೆ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. ನಮ್ಮೆಲ್ಲರ ತನು ಕನ್ನಡ, ಮನ ಕನ್ನಡ, ನುಡಿ ಕನ್ನಡವಾಗಲಿ. ಉಸಿರಿನ ಪ್ರತಿ ಕಣಕಣದಲ್ಲೂ ಕನ್ನಡವಿರಲಿ. ನಮ್ಮ ಆಶಯವೇ ಇದಾಗಿರಲಿ.

1,500 ವರ್ಷಗಳಿಗೂ ಹೆಚ್ಚು ಘನ ಇತಿಹಾಸವುಳ್ಳ ಕನ್ನಡ, ಶಾಸ್ತ್ರೀಯ ಸ್ಥಾನ ಅಲಂಕರಿಸಿದ ಅಭಿಜಾತ ಕನ್ನಡ, ಅಷ್ಟ ಜ್ಞಾನಪೀಠಗಳ ಮೇರುಗನ್ನಡ, ನಮ್ಮ ಬದುಕು-ಬಾಳ್ವೆಯ ತಾಯ್ಗನ್ನಡ. ಕನ್ನಡವೆಂದರೆ ಬರೀ ಭಾಷೆಯಲ್ಲ, ನಮ್ಮ ಪಾಲಿನ ದೇವಭಾಷೆ. ನಮ್ಮ ಮನಸು-ಕನಸುಗಳನ್ನು ಅರಳಿಸಿ ಭವಿಷ್ಯದ ರೆಕ್ಕೆಕೊಟ್ಟು ಹಾರಲು ಶಕ್ತಿ ತುಂಬುವ ಜೀವಭಾಷೆ.

Puneet Raj Kumar saaksha tv

ಕನ್ನಡಿಗರ ಮನೆ-ಮನದಲ್ಲೂ ಕನ್ನಡ ಬೆಳಗುತ್ತಿದೆ, ನಿಜ. ಆದರೆ, ನಮ್ಮ ಕಣ್ಮಣಿಯಾಗಿದ್ದ ಅಕ್ಕರೆಯ ಅಪ್ಪು, ಅಣ್ಣಾವ್ರ ಮುದ್ದಿನ ಕುಡಿ ಪುನೀತ್ ರಾಜಕುಮಾರ್ ಅವರು ಕನ್ನಡ ಹಬ್ಬಕ್ಕೆ ಮುನ್ನ ನಮನ್ನಗಲಿದ್ದಾರೆ. ನಮ್ಮೊಳಗೆ ಕನ್ನಡ ದೀಪವನ್ನು ಬೆಳಗುತ್ತಲೇ ಕಳೆದುಹೋದ ಯುವರತ್ನನ ಆದರ್ಶಗಳಿಗೆ ಅಗ್ರಪೀಠ ಹಾಕಿ ನಮಿಸೋಣ. ಆ ಮೂಲಕ ಪುನೀತರಾಗೋಣ.

ಭೂಮಂಡಲ ಇರುವಷ್ಟು ದಿನ ಕನ್ನಡವಿರುತ್ತದೆ. ಕನ್ನಡ ಇರುವಷ್ಟು ದಿನ ಅಪ್ಪು ಇರುತ್ತಾರೆ. ಈ ವರ್ಷ ಕನ್ನಡದ ಹಬ್ಬವನ್ನು ಪುನೀತ್ ರಾಜಕುಮಾರ್ ಅವರಿಗೆ ಅರ್ಪಿಸುತ್ತಾ, ಮತ್ತೊಮ್ಮೆ ಎಲ್ಲರಿಗೂ ರಾಜ್ಯೋತ್ಸವದ ಶುಭಾಶಯಗಳನ್ನು ಕೋರುತ್ತೇನೆ ಎಂದು ಬರೆದುಕೊಂಡಿದ್ದಾರೆ.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd