ಮುಂಬಯಿ: ಜುಲೈ 27ರಿಂದ ಶ್ರೀಲಂಕಾ (Sri Lanka) ವಿರುದ್ಧ ನಡೆಯಲಿರುವ ಸರಣಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಬಲಿಷ್ಠ ಭಾರತ ತಂಡ ಪ್ರಕಟಿಸಿದ್ದು, ಕನ್ನಡಿಗ ಕೆ.ಎಲ್. ರಾಹುಲ್ ಮತ್ತೆ ಮರಳಿ ತಂಡ ಸೇರಿದ್ದಾರೆ.
ಮೂರು ಪಂದ್ಯಗಳ ಅಂತಾರಾಷ್ಟ್ರೀಯ ಟಿ20 ಸರಣಿ, ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ಟಿ20 ತಂಡಕ್ಕೆ ಸೂರ್ಯಕುಮಾರ್ ಯಾದವ್, ಏಕದಿನ ಪಂದ್ಯಕ್ಕೆ ರೋಹಿತ್ ಶರ್ಮಾ ನಾಯಕರಾಗಿ ಮುಂದುವರೆಯಲಿದ್ದಾರೆ. ಮುಂಬರುವ ಪ್ರವಾಸವು ನೂತನ ಮುಖ್ಯಕೋಚ್ ಕೋಚ್ ಗೌತಮ್ ಗಂಭೀರ್ ಅವರಿಗೆ ಮೊದಲ ಸವಾಲಾಗಿದೆ. ಈ ಸರಣಿಯೊಂದಿಗೆ ತಮ್ಮ ತರಬೇತಿ ಪ್ರಾರಂಭಿಸಲು ಸಜ್ಜಾಗಿದ್ದಾರೆ. ಟಿ20 ತಂಡಕ್ಕೆ ಶುಭಮನ್ ಗಿಲ್ ಉಪನಾಯಕರಾಗಿದ್ದಾರೆ. ಹಾರ್ದಿಕ್ ಪಾಂಡ್ಯ ಸರಣಿಗೆ ಲಭ್ಯರಾಗಿದ್ದಾರೆ. ಇದರೊಂದಿಗೆ ವಾಷಿಂಗ್ಟನ್ ಸುಂದರ್, ಖಲೀಲ್ ಅಹ್ಮದ್ ಸೇರಿದಂತೆ ಅನೇಕ ಯುವ ಆಟಗಾರರು ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಏಕದಿನ ಸರಣಿಯಲ್ಲಿ ಕೆ.ಎಲ್ ರಾಹುಲ್ ಸೇರಿದಂತೆ ರಿಷಭ್ ಪಂತ್ ಜೊತೆಗೆ ಸಂಜು ಸ್ಯಾಮ್ಸನ್ ವಿಕೆಟ್ ಕೀಪರ್ ಆಗಿದ್ದಾರೆ.
ಏಕದಿನ ತಂಡದಲ್ಲಿ ವಿರಾಟ್ ಕೊಹ್ಲಿ ಮರಳಿದ್ದಾರೆ. ಕೆ.ಎಲ್ ರಾಹುಲ್ ಇಲ್ಲಿ ವಿಕೆಟ್ ಕೀಪರ್ ಕೋಟಾದಲ್ಲಿ ಅವಕಾಶ ಪಡೆದಿದ್ದಾರೆ. ವಾಷಿಂಗ್ಟನ್ ಸುಂದರ್, ಖಲೀಲ್ ಅಹಮದ್ , ಹರ್ಷಿತ್ ರಾಣಾ ಬೌಲಿಂಗ್ನಲ್ಲಿ ಅವಕಾಶ ಪಡೆದಿದ್ದಾರೆ. ರಿಯಾನ್ ಪರಾಗ್ ಏಕದಿನ ಮಾದರಿಯಲ್ಲಿ ತಂಡ ಸೇರಿದ್ದಾರೆ. ಎರಡೂ ತಂಡಗಳಿಗೆ ಜಸ್‌ಪ್ರೀತ್ ಬುಮ್ರಾ ಅಲಭ್ಯರಾಗಿದ್ದಾರೆ.
ಭಾರತ ಟಿ20 ತಂಡ:
ಸೂರ್ಯಕುಮಾರ್ ಯಾದವ್ (ನಾಯಕ), ಶುಭಮನ್ ಗಿಲ್ (ಉಪನಾಯಕ), ಯಶಸ್ವಿ ಜೈಸ್ವಾಲ್, ರಿಂಕು ಸಿಂಗ್, ರಿಯಾನ್ ಪರಾಗ್, ರಿಷಭ್ ಪಂತ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯಿ, ಅರ್ಷ್‌ದೀಪ್ ಸಿಂಗ್, ಖಲೀಲ್ ಅಹ್ಮದ್, ಮೊಹಮ್ಮದ್ ಶಮಿ. ಸಿರಾಜ್.
ಏಕದಿನ ತಂಡ:
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಕೆ.ಎಲ್ ರಾಹುಲ್ (ವಿಕೆಟ್ ಕೀಪರ್), ರಿಷಭ್ ಪಂತ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ಶಿವಂ ದುಬೆ, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ. ಸಿರಾಜ್, ವಾಷಿಂಗ್ಟನ್ ಸುಂದರ್, ಅರ್ಷ್‌ದೀಪ್ ಸಿಂಗ್, ರಿಯಾನ್ ಪರಾಗ್, ಅಕ್ಷರ್ ಪಟೇಲ್, ಖಲೀಲ್ ಅಹ್ಮದ್, ಹರ್ಷಿತ್ ರಾಣಾ ಇದೆ.








