ಸೌತ್ ಆಫ್ರಿಕಾ ವಿರುದ್ಧ ಸೆಂಚುರಿಯನ್ ನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಕನ್ನಡಿಗ ಕೆ.ಎಲ್. ರಾಹುಲ್ ಭರ್ಜರಿ ಶತಕ ಸಿಡಿಸಿದ್ದಾರೆ.
ಟಾಸ್ ಗೆದ್ದ ಸೌತ್ ಆಫ್ರಿಕಾ ತಂಡವು ಬೌಲಿಂಗ್ ಆಯ್ದುಕೊಂಡಿತು. ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾಕ್ಕೆ ಉತ್ತಮ ಆರಂಭ ಸಿಗಲಿಲ್ಲ. ಆದರೆ, ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಕೆ.ಎಲ್. ರಾಹುಲ್ 133 ಎಸೆತಗಳಲ್ಲಿ ಶತಕ ಪೂರೈಸಿದರು. ಆದರೆ, 101 ಆಗುತ್ತಿದ್ದಂತೆ ಬೌಲ್ಡ್ ಆಗಿ ಆಟ ಅಂತ್ಯಗೊಳಿಸಿದರು. ಇನಿಂಗ್ಸ್ನ 5ನೇ ಓವರ್ನಲ್ಲೇ ರೋಹಿತ್ ಶರ್ಮಾ (5) ವಿಕೆಟ್ ಪಡೆಯುವ ಮೂಲಕ ಕಗಿಸೊ ರಬಾಡ ಮೊದಲ ವಿಕೆಟ್ ಉರುಳಿಸಿದರು. ಯಶಸ್ವಿ ಜೈಸ್ವಾಲ್ (17) ಹಾಗೂ ಶುಭ್ಮನ್ ಗಿಲ್ (2) ಗೆ ನಾಂಡ್ರೆ ಬರ್ಗರ್ ಪೆವಿಲಿಯನ್ ಹಾದಿ ಹಿಡಿಯುವಂತೆ ಮಾಡಿದರು.
ವಿರಾಟ್ ಕೊಹ್ಲಿ ಹಾಗೂ ಶ್ರೇಯಸ್ ಅಯ್ಯರ್ 68 ರನ್ಗಳ ಜೊತೆಯಾಟವಾಡಿದರು. ರಬಾಡ ಶ್ರೇಯಸ್ ಅಯ್ಯರ್ (31) ಅವರನ್ನು ಕ್ಲೀನ್ ಬೌಲ್ಡ್ ಮಾಡಿದರು. ನಂತರ ವಿರಾಟ್ ಕೊಹ್ಲಿ ಕೂಡ 38 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಪರಿಣಾಮ ಭಾರತ 107 ರನ್ಗಳಿಸುವಷ್ಟರಲ್ಲಿ 5 ವಿಕೆಟ್ ಕಳೆದುಕೊಂಡಿತು. ಕೊನೆಗೆ ಭಾರತ ತಂಡ 245ಕ್ಕೆ ಎಲ್ಲ ವಿಕೆಟ್ ಕಳೆದುಕೊಂಡಿತು.