ಕನ್ನಡಿಗರು ನಪುಂಸಕರು : ಕೆ.ಎಸ್.ಭಗವಾನ್

1 min read
K.S. bhagavan saakshatv

ಕನ್ನಡಿಗರು ನಪುಂಸಕರು : ಕೆ.ಎಸ್.ಭಗವಾನ್

ಮೈಸೂರು : ಸದಾ ಒಂದಿಲ್ಲೊಂದು ವಿವಾದವನ್ನು ಮೈ ಮೇಲೆ ಎಳೆದುಕೊಳ್ಳುವ ಸಾಹಿತಿ ಕೆ.ಎಸ್.ಭಗವಾನ್ ಅವರು ಇದೀಗ ಕನ್ನಡಿಗರು ನಪುಂಸಕರು ಎಂದು ಕನ್ನಡಿಗರನ್ನು ಕೆರಳಿಸಿದ್ದಾರೆ.

ಕೆ.ಎಸ್.ಭಗವಾನ್ ಅವರು ಜಿಲ್ಲಾಧಿಕಾರಿ ಕಚೇರಿ ಮುಂದೆ ಮೈಸೂರು ಜಿಲ್ಲಾ ಕನ್ನಡ ಚಳವಳಿಗಾರರ ಸಂಘದ ನೇತೃತ್ವದಲ್ಲಿ ಸೋಮವಾರ ನಡೆದ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಈ ವೇಳೆ ಮಾತನಾಡಿದ ಅವರು, ತಮಿಳರು ಹೋರಾಡಿ ಸ್ಪರ್ಧಾತ್ಮಕ ಪರೀಕ್ಷೆಗಳು ತಮಿಳಿನಲ್ಲಿ ನಡೆಯುವಂತೆ ಮಾಡಿದರು. ಕರ್ನಾಟಕದಲ್ಲಿ ಇನ್ನೂ ಹೋರಾಟ ನಡೆದಿಲ್ಲ. ಒಂದು ರೀತಿಯಲ್ಲಿ ಕನ್ನಡಿಗರು ನಪುಂಸಕರು ಎಂದು ಹೇಳಿದರು.

K.S. bhagavan saakshatv

ಇನ್ನು ಕನ್ನಡ ಭಾಷೆಯಲ್ಲಿ ಬ್ಯಾಂಕಿಂಗ್ ಪರೀಕ್ಷೆ ನಡೆಸಬೇಕು. ತಮಿಳುನಾಡಿನ ಎಲ್ಲ ರಾಜಕೀಯ ಪಕ್ಷಗಳು ಒಂದಾಗಿ ಮೇಕೆದಾಟು ಯೋಜನೆ ವಿರುದ್ಧ ಕೇಂದ್ರಕ್ಕೆ ಮನವಿ ಸಲ್ಲಿಸಿವೆ. ಆದರೆ, ರಾಜ್ಯದಲ್ಲಿ ಯೋಜನೆ ಜಾರಿಗೆ ಆಗ್ರಹಿಸಿ ರಾಜಕೀಯ ಪಕ್ಷಗಳು ಒಂದಾಗಿ ಕೇಂದ್ರದ ಜತೆ ಚರ್ಚಿಸಿಲ್ಲ ಎಂದು ರಾಜಕೀಯ ಪಕ್ಷಗಳ ವಿರುದ್ಧ ಕಿಡಿಕಾರಿದರು.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd