Nirani | ಕೈಗಾರಿಕ ಉದ್ಯೋಗದಲ್ಲಿ ಕನ್ನಡಿಗರಿಗೆ ಆದ್ಯತೆ
ಕೈಗಾರಿಕಾ ಘಟಕಗಳಲ್ಲಿ ಶೇ. 70 ರಷ್ಟು ಕನ್ನಡಿಗರಿಗೆ ಉದ್ಯೋಗ
ರಾಜ್ಯ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಮಾಹಿತಿ
ಶೇ. 85ರಷ್ಟು ಉದ್ಯೋಗವನ್ನು ಕನ್ನಡಿಗರಿಗೆ ನೀಡಬೇಕು
ಕೈಗಾರಿಕೆಗಳಿಗ ಸಚಿವ ಮುರುಗೇಶ್ ನಿರಾಣಿ ಎಚ್ಚರಿಕೆ
ಬೆಂಗಳೂರು : ಡಾ. ಸರೋಜಿನಿ ಮಹಿಷಿ ವರದಿಯನ್ವಯ ರಾಜ್ಯದ ಕೈಗಾರಿಕೆಗಳಲ್ಲಿ ಶೇ. 85ರಷ್ಟು ಉದ್ಯೋಗವನ್ನು ಕನ್ನಡಿಗರಿಗೆ ನೀಡಬೇಕು. ಇದರಲ್ಲಿ ಯಾವುದೇ ಲೋಪವಾಗಿದ್ದರೆ ಅಂತಹ ಕೈಗಾರಿಕೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದು ರಾಜ್ಯ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಎಚ್ಚರಿಸಿದ್ದಾರೆ.
ಧಾನ ಪರಿಷತ್ ನಲ್ಲಿ ಜೆಡಿಎಸ್‍ನ ಸಿ. ಎನ್. ಮಂಜೇಗೌಡರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಹೊಸ ಕೈಗಾರಿಕಾ ನೀತಿ – 2020 – 25ರ ಅನ್ವಯ ರಿಯಾಯ್ತಿ ಹಾಗೂ ಉತ್ತೇಜನ ಪಡೆಯಲು ಕೈಗಾರಿಕಾ ಘಟಕಗಳು ಡಿ ವೃಂದದಲ್ಲಿ ಶೇ. 100 ರಷ್ಟು ಹಾಗೂ ಘಟಕದಲ್ಲಿ ಒಟ್ಟಾರೆ ಶೇ. 70 ರಷ್ಟು ಕನ್ನಡಿಗರಿಗೆ ಉದ್ಯೋಗ ನೀಡಬೇಕು ಎಂಬ ಷರತ್ತು ವಿಧಿಸಲಾಗಿದೆ ಎಂದು ಮಾಹಿತಿ ನೀಡಿದರು. ಜೊತೆಗೆ ಕೈಗಾರಿಕಾ ಟೌನ್ ಶಿಪ್‍ಗಳ ಬಳಿಯೇ ಜನವಸತಿ ಪ್ರದೇಶಗಳನ್ನು ನಿರ್ಮಾಣ ಮಾಡುವ ಮೂಲಕ ವಾಕ್ ಟು ವರ್ಕ್‍ಗೆ ಆದ್ಯತೆ ನೀಡಲಾಗುವುದು ಎಂದರು.
ಇನ್ನು ರಾಜ್ಯದ 5 ವಲಯಗಳಲ್ಲಿ ಕೈಗಾರಿಕಾ ಟೌನ್ ಶಿಪ್‍ಗಳನ್ನು ಸ್ಥಾಪನೆ ಮಾಡುವ ಮೂಲಕ ಕೈಗಾರಿಕೆಗಳನ್ನು ಎರಡನೇ ಹಂತದ ನಗರಗಳಿಗೂ ವಿಸ್ತರಿಸಲು ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ. ಕೋಲಾರದಲ್ಲಿರುವ ಬೆಮೆಲ್ ಕಾರ್ಖಾನೆ ಕೇಂದ್ರ ಸರ್ಕಾರದ ಅಧೀನದಲ್ಲಿದೆ. ಇದನ್ನು ಮುಚ್ಚುವ ಯಾವುದೇ ಉದ್ದೇಶ ಸರ್ಕಾರಕ್ಕಿಲ್ಲ ಎಂದರು.
ಇದಾದ ಬಳಿಕ ಜೆಡಿಎಸ್‍ನ ಸದಸ್ಯ ಗೋವಿಂದರಾಜು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕಾರ್ಖಾನೆ ಮುಚ್ಚಲಾಗುತ್ತಿರುವ ಆತಂಕ ,ಅನುಮಾನ ಯಾರಲ್ಲೂ ಬೇಡ ಎಂದು ಅವರು ಸ್ಪಷ್ಟಪಡಿಸಿದರು. ಅಲ್ಲದೇ ಅನುಪಯುಕ್ತವಾಗಿರುವ ಪ್ರದೇಶವನ್ನು ಪಡೆದು ಅಲ್ಲಿ ಖಾಸಗಿ ಕೈಗಾರಿಕೆಗಳ ಸ್ಥಾಪೆನೆಗೆ ಅವಕಾಶ ಮಾಡಿಕೊಡಲಾಗುವುದು. ಇದರಿಂದ ಉದ್ಯೋಗ ಸೃಷ್ಟಿಗೂ ಆದ್ಯತೆ ನೀಡಲಾಗುವುದು ಎಂದು ಭರವಸೆ ನೀಡಿದರು. Kannadigas preferred in industrial employment of 85% said by industrial minister Nirani