ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ನಲ್ಲಿ ಅರ್ಧ ಶತಕ ಗಳಿಸುವುದರ ಮೂಲಕ ಕನ್ನಡಿಗ ಕೆ.ಎಲ್. ರಾಹುಲ್ ದಾಖಲೆ ಬರೆದಿದ್ದಾರೆ.
ಮೊದಲ ಇನ್ನಿಂಗ್ಸ್ ನಲ್ಲಿ ಭಾರತ ತಂಡವು ಇಂಗ್ಲೆಂಡ್ ನ್ನು 243 ರನ್ ಗಳಿಗೆ ಆಲೌಟ್ ಮಾಡಿತ್ತು. ನಂತರ ಬ್ಯಾಟಿಂಗ್ ಆರಂಭಿಸಿದ ಭಾರತ ಉತ್ತಮ ರನ್ ಕಲೆ ಹಾಕುತ್ತಿದೆ. ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ 76 ಎಸೆತಗಳಲ್ಲಿ 80 ರನ್ ಗಳಿಸಿದರೆ, ಕನ್ನಡಿಗ ಕೆಎಲ್ ರಾಹುಲ್ 86 ರನ್ ಗಳಿಸಿದ್ದಾರೆ.
4ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ರಾಹುಲ್ 123 ಎಸೆತಗಳಲ್ಲಿ 8 ಬೌಂಡರಿ ಹಾಗೂ 2 ಸಿಕ್ಸರ್ ನೆರವಿನಿಂದ 86 ರನ್ ಗಳಿಸಿದ್ದಾರೆ. ಆದರೆ, ಬಿಗ್ ಶಾಟ್ ಗೆ ಕೈ ಹಾಕಿ ರಾಹುಲ್ ಔಟ್ ಆದರು. ಈ ಮೂಲಕ ರಾಹುಲ್ ರಾಹುಲ್ ಟೆಸ್ಟ್ ಕ್ರಿಕೆಟ್ ನಲ್ಲಿ ತವರಿನಲ್ಲಿ 1 ಸಾವಿರ ರನ್ ಪೂರೈಸಿದ್ದಾರೆ. ರಾಹುಲ್ ಭಾರತದಲ್ಲಿ 17 ಟೆಸ್ಟ್ ಪಂದ್ಯಗಳನ್ನಾಡಿದ್ದು, 43.00 ಕ್ಕಿಂತ ಹೆಚ್ಚು ಸರಾಸರಿಯಲ್ಲಿ ರನ್ ಗಳಿಸಿದ್ದಾರೆ. ಒಂದು ಶತಕ ಮತ್ತು ಒಂಬತ್ತು ಅರ್ಧಶತಕಗಳು ಸೇರಿವೆ.
2014ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಮೊದಲ ಟೆಸ್ಟ್ ಪಂದ್ಯ ಆಡಿದ್ದ ರಾಹುಲ್ ಇಲ್ಲಿಯವರೆಗೆ 50 ಟೆಸ್ಟ್ ಪಂದ್ಯಗಳಲ್ಲಿ 2,841 ರನ್ ಗಳಿಸಿದ್ದಾರೆ. ಆಂಗ್ಲರ ವಿರುದ್ಧ ಆಡಿರುವ 13 ಪಂದ್ಯಗಳಲ್ಲಿ 933 ರನ್ ಗಳಿಸಿದ್ದಾರೆ.