ಕಣ್ಣಪ್ಪ (Kannappa) ಚಿತ್ರ ತಂಡ ಈಗ ಶಿವನ ಮೊರೆ ಹೋಗಿದೆ.
ಹಿರಿಯ ನಟ ಮೋಹನ್ ಬಾಬು, ವಿಷ್ಣು ಮಂಚು (Vishnu Manchu) ಸೇರಿದಂತೆ ಕಣ್ಣಪ್ಪ ಚಿತ್ರ ತಂಡವು ಕೇದಾರನಾಥ (Kedarnath), ಬದರಿನಾಥ್ ಮತ್ತು ಋಷಿಕೇಶಕ್ಕೆ ಭೇಟಿ ನೀಡಿದೆ. 12 ಜ್ಯೋತಿರ್ಲಿಂಗಗಳ ದರ್ಶನಕ್ಕೆ ಚಿತ್ರ ತಂಡ ಮುಂದಾಗಿದೆ.
ನಟ ಮೋಹನ್ ಬಾಬು, ಅವರ ಪುತ್ರ ವಿಷ್ಣು ಮಂಚು, ನಿರ್ಮಾಪಕ ಮುಖೇಶ್ ಕುಮಾರ್ ಮತ್ತು ನಟ ಅರ್ಪಿತ್ ರಂಕಾ ಅವರ ಜತೆಗೆ ಕೇದಾರನಾಥ, ಬದರಿನಾಥ್ ಮತ್ತು ಋಷಿಕೇಶದ ಶಿವನ ದೇವಾಲಯಗಳಿಗೆ ಭೇಟಿ ನೀಡಿ, ಆಧ್ಯಾತ್ಮಿಕ ಯಾತ್ರೆ ಕೈಗೊಂಡಿದೆ. ಹಿಮಾಲಯದ ನಡುವೆ ನೆಲೆಸಿರುವ ಶಿವನಿಗೆ ಸಮರ್ಪಿತವಾದ ಹನ್ನೆರಡು ಜ್ಯೋತಿರ್ಲಿಂಗಗಳಲ್ಲಿ ಒಂದಾದ ಕೇದಾರನಾಥಕ್ಕೆ ತಂಡವು ಭೇಟಿ ನೀಡಿತ್ತು. ನಂತರ ಬದರಿನಾಥದಲ್ಲಿ ಪ್ರಾರ್ಥನೆ ಸಲ್ಲಿಸಿ, ಋಷಿಕೇಶಕ್ಕೆ ತಂಡ ತೆರಳಿದೆ. ಈ ಚಿತ್ರ ಬಿಡುಗಡೆಗೂ ಮುನ್ನ ಎಲ್ಲ 12 ಜ್ಯೋತಿರ್ಲಿಂಗ ಪುಣ್ಯ ಕ್ಷೇತ್ರಗಳಿಗೆ ತೆರಳುವುದಾಗಿ ಚಿತ್ರ ತಂಡ ಘೋಷಿಸಿದೆ. ಮುಂದಿನ ದಿನಗಳಲ್ಲಿ ಇನ್ನೂ 10 ಜ್ಯೋತಿರ್ಲಿಂಗಗಳ ದರ್ಶನ ಮಾಡುವುದಾಗಿ ಚಿತ್ರ ತಂಡ ಹೇಳಿದೆ.
ಮುಖೇಶ್ ಕುಮಾರ್ ಸಿಂಗ್ ಈ ಚಿತ್ರಕ್ಕೆ ಕ್ಯಾಪ್ ತೊಟ್ಟಿದ್ದಾರೆ. ಮೋಹನ್‌ಲಾಲ್, ಪ್ರಭಾಸ್, ಅಕ್ಷಯ್ ಕುಮಾರ್, ಮೋಹನ್ ಬಾಬು ಶರತ್‌ಕುಮಾರ್








