Sandalwood : ಮಾರ್ಚ್ 4ಕ್ಕೆ ಬಿಡುಗಡೆಗೆ ಸಜ್ಜಾದ ಕನ್ನೇರಿ ಸಿನಿಮಾ
ನೀನಾಸಂ ಮಂಜು ನಿರ್ದೇಶನದಲ್ಲಿ ಮೂಡಿ ಬಂದಿರುವ ನೈಜ ಘಟನೆಯಾಧಾರಿತ ಮಹಿಳಾ ಪ್ರಧಾನ ಸಿನಿಮಾ ‘ಕನ್ನೇರಿ’ ಮಾರ್ಚ್ 4ರಂದು ಬಿಡುಗಡೆಯಾಗಲಿದೆ. ಈಗಾಗಲೇ ಪೋಸ್ಟರ್, ಟ್ರೇಲರ್, ಹಾಡು ಹೀಗೆ ಪ್ರತಿ ಹಂತದಲ್ಲೂ ಪ್ರೇಕ್ಷಕರ ಗಮನ ಸೆಳೆದಿರುವ ಕನ್ನೇರಿ ಸಿನಿಮಾದಲ್ಲಿ ಅರ್ಚನಾ ಮಧುಸೂಧನ್ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ. ಉಳಿದಂತೆ ಅನಿತಾ ಭಟ್, ಅರುಣ್ ಸಾಗರ್, ಎಂ.ಕೆ.ಮಠ್, ಕರಿಸುಬ್ಬು ಒಳಗೊಂಡಂತೆ ಪ್ರತಿಭಾನ್ವಿತರು ಬಣ್ಣ ಹಚ್ಚಿದ್ದಾರೆ.
ಕೋಟಿಗಾನಹಳ್ಳಿ ರಾಮಯ್ಯ ಈ ಚಿತ್ರದ ಕಥೆಯ ಜವಾಬ್ದಾರಿ ವಹಿಸಿಕೊಂಡಿದ್ರೆ, ಚಿತ್ರಕಥೆ ಹಾಗೂ ನಿರ್ದೇಶನದ ಸಾರಥ್ಯವನ್ನು ನೀಸಾಸಂ ಮಂಜು ವಹಿಸಿಕೊಂಡಿದ್ದಾರೆ. ಗಣೇಶ್ ಹೆಗ್ಡೆ ಕ್ಯಾಮೆರಾ ವರ್ಕ್, ಮಣಿಕಾಂತ್ ಕದ್ರಿ ಸಂಗೀತ ನಿರ್ದೇಶನ, ಸುಜಿತ್ ಎಸ್ ನಾಯಕ್ ಸಂಕಲನ ಚಿತ್ರಕ್ಕಿದೆ.
ಕೊಡಗಿನಲ್ಲಿ ಸದ್ದು ಮಾಡಿದ್ದ ದಿಡ್ಡಳ್ಳಿ ಸಂತ್ರಸ್ತರ ಹೋರಾಟ ಮತ್ತು ಕ್ಷೀರಸಾಗರ ಅವರ ‘ಜೇನು: ಆಕಾಶದ ಅರಮನೆ’ ಕಾದಂಬರಿ ಎಳೆಯನ್ನು ಚಿತ್ರದಲ್ಲಿ ಬಳಸಿಕೊಂಡು ಕಥೆ ಹೆಣೆಯಲಾಗಿದೆ








