Kanpur | ಟ್ರ್ಯಾಕ್ಟರ್ ಪಲ್ಟಿಯಾಗಿ 24 ಭಕ್ತರು ದುರ್ಮರಣ!
ಉತ್ತರ ಪ್ರದೇಶದ ಕಾನ್ಪುರದಲ್ಲಿ ಘಟನೆ
ಹಲವರ ಸ್ಥಿತಿ ಗಂಭೀರ, ಆಸ್ಪತ್ರೆಯಲ್ಲಿ ಚಿಕಿತ್ಸೆ
ಮೃತ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ
ಗಾಯಾಳುಗಳಿಗೆ ತಲಾ 50 ಸಾವಿರ ಪರಿಹಾರ
ಲಕ್ನೋ : ಟ್ರ್ಯಾಕ್ಟರ್ ಪಲ್ಟಿಯಾಗಿ 24 ಮಂದಿ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ.
ಯಾತಾಥ್ರಿಗಳನ್ನು ಹೊತ್ತೊಯ್ಯುತ್ತಿದ್ದ ಟ್ರ್ಯಾಕ್ಟರ್ ಕಾನ್ಪುರ ಜಿಲ್ಲೆಯ ಘಟಂಪುರ ಪ್ರದೇಶದಲ್ಲಿ ಪಲ್ಟಿಯಾಗಿದೆ.
ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಕಾರ್ಯಾಲಯ ಟ್ವೀಟ್ ಮಾಡಿದ್ದು, ಕಾನ್ಪುರದಲ್ಲಿ ಸಂಭವಿಸಿದ ಟ್ರಾಕ್ಟರ್ ಅಪಘಾತದಿಂದ ಕಂಗಾಲಾಗಿದ್ದೇವೆ.

ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥನೆ ಸಲ್ಲಿಸುತ್ತೇನೆ.
ಮೃತರ ಕುಟುಂಬಕ್ಕೆ ಪಿಎಂಎನ್ ಆರ್ ಎಫ್ ನಿಂದ 2 ಲಕ್ಷ ರೂಪಾಯಿ ಪರಿಹಾರವನ್ನು ನೀಡಲಾಗುವುದು ಮತ್ತು ಘಟನೆಯಲ್ಲಿ ಗಾಯಗೊಂಡವರಿಗೆ 50 ಸಾವರಿ ನೀಡಲಾಗುತ್ತದೆ ಎಂದು ತಿಳಿಸಿದೆ.