ಕಾಂತಾರ ಚೆಲುವೆ ಸಪ್ತಮಿ ಗೌಡ (Saptami Gowda) ದಿ ವ್ಯಾಕ್ಸಿನ್ ವಾರ್ ಮೂಲಕ ಬಾಲಿವುಡ್ ನಂತರ ಈಗ ತೆಲುಗು ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ.
ತಮ್ಮುಡು (Thammadu) ಚಿತ್ರದ ಮೂಲಕ ತೆಲುಗು (Telugu) ಸಿನಿಮಾ ರಂಗ ಪ್ರವೇಶಿಸಿದ್ದಾರೆ. ಸದ್ಯ ಸಪ್ತಮಿಗೌಡ ಅವರು ಕನ್ನಡ, ಹಿಂದಿ ಮತ್ತು ತೆಲುಗಿನ ಚಿತ್ರಗಳನ್ನು ಒಪ್ಪಿಕೊಳ್ಳುವ ಮೂಲಕ ಬಹುಭಾಷಾ ತಾರೆಯಾಗಿ ಮಿಂಚುತ್ತಿದ್ದಾರೆ. ಸದ್ಯ ಕನ್ನಡದಲ್ಲೇ ಅವರು ಮೂರು ಚಿತ್ರಗಳನ್ನು ಒಪ್ಪಿಕೊಂಡಿದ್ದಾರೆ.
ಈಗ ಯುವರಾಜಕುಮಾರ್ ನಾಯಕನಾಗಿ ನಟಿಸುತ್ತಿರುವ ಯುವ ಸಿನಿಮಾದಲ್ಲಿ ನಾಯಕಿಯಾಗಿ ಸಪ್ತಮಿ ಗೌಡ ನಟಿಸುತ್ತಿದ್ದಾರೆ. ಯುವರಾಜ್ ಕುಮಾರ್ ಈ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ಲಾಂಚ್ ಆಗುತ್ತಿದ್ದು, ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ನಲ್ಲಿ ಸಿನಿಮಾ ಮೂಡಿ ಬರುತ್ತಿದೆ.