kantara | ಭೂತಕೋಲ ಹಿಂದೂ ಧರ್ಮಕ್ಕಿಂತ ಹಿಂದಿನಿಂದ ಇದೆ
ರಿಷಬ್ ಶೆಟ್ಟಿ ಹೀರೋ ಆಗಿ ನಿರ್ದೇಶಿಸಿರುವ ಸಿನಿಮಾ ಕಾಂತಾರ. ಕನ್ನಡದಲ್ಲಿ ಸೆನ್ಸೇಷನ್ ಕ್ರಿಯೆಟ್ ಮಾಡಿರುವ ಈ ಸಿನಿಮಾ ತೆಲುಗಿನಲ್ಲಿ ಸೂಪರ್ ಹಿಟ್ ಟಾಕ್ ಪಡೆದುಕೊಂಡಿದೆ.
ದೇಶದಾದ್ಯಂತ ಕಾಂತಾರ ಸಿನಿಮಾಗೆ ಬ್ರಹ್ಮರಥ ಹಿಡಿಯುತ್ತಿದ್ದಾರೆ.
ರಿಷಬ್ ಶೆಟ್ಟಿ ಅಭಿನಯಕ್ಕೆ ಸಿನಿಮಾ ಪ್ರಿಯರು ಪಿಧಾ ಆಗಿದ್ದು, ಕಾಂತಾರ ಸಿನಿಮಾವನ್ನು ಮುಕ್ತಕಂಠದಿಂದ ಹಾಡಿ ಹೊಗಳುತ್ತಿದ್ದಾರೆ.
ಈ ನಡುವೆ ಕಾಂತಾರ ಸಿನಿಮಾ ಕುರಿತು ಪ್ರತಿಕ್ರಿಯಿಸಿರುವ ನಟ ಚೇತನ್ ಅಹಿಂಸಾ, ನಮ್ಮ ಕನ್ನಡದ ಚಲನಚಿತ್ರ `ಕಾಂತಾರ’ವು ರಾಷ್ಟ್ರಮಟ್ಟದಲ್ಲಿ ಸದ್ದು ಮಾಡುತ್ತಿರುವುದು ಖುಷಿಯ ಸಂಗತಿ.

ಭೂತಕೋಲವು ಹಿಂದೂ ಸಂಸ್ಕೃತಿಗೆ ಸೇರುತ್ತದೆ ಎಂದು ನಿರ್ದೇಶಕ ರಿಷಬ್ ಶೆಟ್ಟಿಯವರು ಹೇಳಿದ್ದಾರೆ.
ಇದು ನಿಜವಲ್ಲ. ನಮ್ಮ ಪಂಬದ/ನಲಿಕೆ/ಪರವರ ಬಹುಜನ ಸಂಪ್ರದಾಯಗಳು, ವೈದಿಕ-ಬ್ರಾಹ್ಮಣ್ಯದ ಹಿಂದೂ ಧರ್ಮಕ್ಕಿಂತ ಹಿಂದಿನಿಂದ ಇರುವವು.
ಮೂಲನಿವಾಸಿ ಸಂಸ್ಕೃತಿಗಳನ್ನು ಪರದೆಯ ಮೇಲೆಯಾಗಲಿ, ಅದರಾಚೆಯಾಗಲಿ, ಸತ್ಯ ಸಂಗತಿಗಳೊಂದಿಗೆ ತೋರಿಸಬೇಕೆಂದು ನಾವು ಕೇಳುತ್ತೇವೆ ಎಂದು ತಮ್ಮ ಫೇಸ್ಬುಕ್ ಪುಟದಲ್ಲಿ ಬರೆದುಕೊಂಡಿದ್ದಾರೆ.








