Kantara – ಕರ್ನಾಟಕದಲ್ಲಿ ಕಾಂತಾರ never before ever ofter ದಾಖಲೆ
ದೇಶದೆಲ್ಲೆಡೆ ಕಾಂತಾರ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಈ ಸಿನಿಮಾ ಈಗಾಗಲೇ ಸಾಕಷ್ಟು ದಾಖಲೆಗಳನ್ನು ತನ್ನ ಹೆಸರಿಗೆ ಬರೆದುಕೊಂಡಿದೆ. ಈ ನಡುವೆ ಕಾಂತಾರಾ ಕರ್ನಾಟಕದಲ್ಲಿ ಹೊಸ ದಾಖಲೆಯನ್ನು ಕ್ರಿಯೇಟ್ ಮಾಡಿದೆ.
ಕಾಂತಾರ ಸಿನಿಮಾ ಈವರೆಗೂ ಹೊಂಬಾಳೆ ಫಿಲಮ್ಸ್ ನಿರ್ಮಿಸಿರುವ ಚಲನಚಿತ್ರಗಳ ಪೈಕಿ ಕರ್ನಾಟಕದಲ್ಲಿ ಅತ್ಯಂತ ಹೆಚ್ಚು ಜನರ ವೀಕ್ಷಿಸಿದ ಸಿನಿಮಾ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಈ ಮಾಹಿತಿಯನ್ನು ಸಿನಿಮಾದ ನಿರ್ಮಾಪಕರು ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ.

ಈವರೆಗೆ ಹೊಂಬಾಳೆ ಫಿಲ್ಮ್ಸ್ ನಿರ್ಮಿಸಿರುವ ಚಲನಚಿತ್ರಗಳ ಪೈಕಿ ಕರ್ನಾಟಕದಲ್ಲಿ ಅತ್ಯಂತ ಹೆಚ್ಚು ಜನ ವೀಕ್ಷಿಸಿದ ಚಿತ್ರ ಎಂಬ ಹೆಗ್ಗಳಿಕೆ. ಇನ್ನಷ್ಟು ಹೊಸ ದಾಖಲೆ ನಿರ್ಮಿಸುವ ಹಾದಿಯಲ್ಲಿ ‘ಕಾಂತಾರ’. ನಿಮ್ಮ ಪ್ರೋತ್ಸಾಹಕ್ಕೆ ನಾವು ಸದಾ ಋಣಿ. ಧನ್ಯವಾದಗಳು ಕರ್ನಾಟಕ ಎಂದು ನಿರ್ಮಾಪಕ ವಿಜಯ್ ಕಿರಂಗದೂರ ಬರೆದುಕೊಂಡಿದ್ದಾರೆ.








